ಕೊಪ್ಪಳ ಎಸ್ಎಸ್ಎ್ಎಸ್, ಐಸಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಉದ್ಘಾಟಿಸಿದರು. ಶಾಲೆ ವ್ಯವಸ್ಥಾಪಕ ಫಾ. ಮ್ಯಾಥ್ಯೂ ಮಾಮ್ಲ, ಶಿಕ್ಷಕರು ಇದ್ದರು.
ಕೊಪ್ಪಳ : ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ತಿರಸ್ಕರಿಸಿ, ಕಿಚನ್ ಗಾರ್ಡನ್, ಜೇನುಸಾಕಾಣಿಕೆ ಹಾಗೂ ಅಣಬೆ ಬೆಳೆಯಂತಹ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಉತ್ತೇಜಿಸಬೇಕು ಎಂದು ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಕೃಷ್ಣ ಸಿ. ಉಕ್ಕುಂದ ಹೇಳಿದರು.
ನಗರದ ಎಸ್ಎಸ್ಎ್ಎಸ್, ಐಸಿಎಸ್ಇ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ಸಂರಕ್ಷಣೆ ಜತೆಗೆ ಪರಿಸರ ಮಾಲಿನ್ಯ ತಡೆಗೂ ಎಲ್ಲರೂ ಆದ್ಯತೆ ನೀಡಬೇಕು. ಅಂಗಡಿಗಳಲ್ಲಿ ನೀಡುವ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದನ್ನು ಕಡಿಮೆ ಮಾಡಬೇಕು. ಮನೆಯಲ್ಲಿ ಅಣಬೆ ಬೆಳೆಸುವುದು, ಜೇನುಸಾಕಾಣಿಕೆ ಹಾಗೂ ಕಿಚನ್ ಗಾರ್ಡನ್ ನಿರ್ಮಿಸುವುದು ಪರಿಸರಕ್ಕೆ ನೀಡುವ ಮಹತ್ವದ ಕೊಡುಗೆಯಾಗಿದೆ ಎಂದು ತಿಳಿಸಿದರು.
ಶಾಲೆ ವ್ಯವಸ್ಥಾಪಕ ಫಾ. ಮ್ಯಾಥ್ಯೂ ಮಾಮ್ಲ, ಪ್ರಗತಿಪರ ರೈತ ಶ್ರೀಪಾದರಾಜ ಮುರುಡಿ, ಸಂಪನ್ಮೂಲ ವ್ಯಕ್ತಿ ದೇವೇಂದ್ರಪ್ಪ ರ್ಜಿಲಿ, ಶಿಕ್ಷಕರು, ವಿದ್ಯಾರ್ಥಿಗಳಿದ್ದರು.