ಕೊಪ್ಪಳದಲ್ಲಿ 77ನೇ ಗಣರಾಜ್ಯೋತ್ಸವ ಅಂಗವಾಗಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಧ್ವಜಾರೋಹಣ ನೆರವೇರಿಸಿದರು. ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ವಿಪ ಸದಸ್ಯೆ ಹೇಮಲತಾ ನಾಯಕ ಇದ್ದರು.  
ಕೊಪ್ಪಳ

ಕೊಪ್ಪಳದಲ್ಲಿ ಸಂಭ್ರಮದ ಗಣರಾಜ್ಯೋತ್ಸವ

ರವೀಂದ್ರ ರಡ್ಡಿ

ಪ್ರಮುಖ ಮುಖ್ಯಾಂಶಗಳು

  • ಅಭಿವೃದ್ಧಿಯೇ ನಮ್ಮ ಧ್ಯೇಯ
  • ಸಚಿವ ಶಿವರಾಜ ತಂಗಡಗಿ ಅಭಿಮತ
ಕೊಪ್ಪಳ: ಸಂವಿಧಾನದ ಆಶಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಅಭಿವೃದ್ಧಿಪರ ಆಡಳಿತ ನಡೆಸುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
77ನೇ ಗಣರಾಜ್ಯೋತ್ಸವ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಧ್ಚಜಾರೋಹಣ ನೆರವೇರಿಸಿ ಮಾತನಾಡಿದರು.
ಆರ್ಥಿಕ ದುರ್ಬಲ ವರ್ಗದವರಿಗೆ ಪಂಚ ಗ್ಯಾರಂಟಿಗಳು ವರವಾಗಿವೆ. ಶಕ್ತಿ, ಗೃಹಲಕ್ಷಿ$್ಮ, ಗೃಹಜ್ಯೋತಿ, ಅನ್ನ ಭಾಗ್ಯ, ಯುವನಿಧಿ ಯೋಜನೆಯಡಿ ಜಿಲ್ಲೆಯ ಲಾಂತರ ಜನ ಲಾಭ ಪಡೆಯುತ್ತಿದ್ದಾರೆ. ಹೊಸದಾಗಿ 87 ಕಂದಾಯ ಗ್ರಾಮ ರಚಿಸಲಾಗಿದೆ. 6200 ಜನರಿಗೆ ೆ.2ರಂದು ಹಾವೇರಿಯಲ್ಲಿ ನಡೆವ ಕಾರ್ಯಕ್ರಮದಲ್ಲಿ ಹಕ್ಕುಪತ್ರ ವಿತರಿಸಲಾಗುವುದು. ಮಹಿಳೆಯರ ರಕ್ಷಣೆಗಾಗಿ ಅಕ್ಕಪಡೆ ರಚನೆಗೊಂಡಿದ್ದು ಜಿಲ್ಲೆಯಲ್ಲೂ ಕಾರ್ಯನಿರ್ವಹಿಸುತ್ತಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಜಿಲ್ಲೆಗೆ 200 ಕೋಟಿ ರೂ. ಒದಗಿಸಿದೆ. 164.1 ಕೋಟಿ ರೂ. ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಕೃಷಿಭಾಗ್ಯ ಯೋಜನೆಯಡಿ 162 ಕೃಷಿ ಹೊಂಡ ನಿರ್ಮಿಸಿ ರೈತರಿಗೆ ಅನುಕೂಲ ಮಾಡಲಾಗಿದೆ ಎಂದರು.
ಅಸಂಖ್ಯ ಜನರ ಹೋರಾಟ ಲವಾಗಿ 1947, ಆಗಸ್ಟ್​ 15ರಂದು ನಮಗೆ ಸ್ವಾತಂತ್ರ್ಯ ದೊರೆತಿದೆ. ದೇಶಕ್ಕೆ ಪ್ರತ್ಯೇಕ ಸಂವಿಧಾನ ರಚನೆಯಾಗಿ ಡಾ.ಬಾಬಾ ಸಾಹೇಬ್​ ಅಂಬೇಡ್ಕರ್​ ನೇತೃತ್ವದ ತಂಡ ಹಗಲಿರುಳು ಶ್ರಮಿಸಿತು. 1950ರ ಜನೆವರಿ 26ರಂದು ಭಾರತ ಗಣರಾಜ್ಯವಾಗಿ ಅಸ್ತಿತ್ವಕ್ಕೆ ಬಂತು. ಏಕ ಸಂವಿಧಾನದಡಿ ಕಾರ್ಯನಿರ್ವಹಣೆ ಆರಂಭವಾಯಿತು. ಈ ದಿನ ಭಾರತೀಯರಿಗೆಲ್ಲ ಶ್ರೇಷ್ಠ ದಿನವೆಂದು ಬಣ್ಣಿಸಿದರು.
ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾವೇಂದ್ರ ಹಿಟ್ನಾಳ, ವಿಪ ಸದಸ್ಯೆ ಹೇಮಲತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಸನ್ನ ಗಡಾದ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಡಿಸಿ ಡಾ.ಸುರೇಶ ಬಿ.ಇಟ್ನಾಳ, ಜಿಪಂ ಸಿಇಒ ವರ್ಣಿತ್​ ನೇಗಿ, ಎಡಿಸಿ ಸಿದ್ರಾಮೇಶ್ವರ, ಎಸಿ ಕ್ಯಾ.ಮಹೇಶ ಮಾಲಗಿತ್ತಿ,