ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಎಸ್ಡಿಪಿಐ ತಾಲೂಕು ಸಮಿತಿ ಸಭೆಯಲ್ಲಿ ಎಸ್ಡಿಪಿಐ ಪಕ್ಷದ ಜಿಲ್ಲಾ ಉಸ್ತುವಾರಿ ಅಬ್ರಾರ್ ಅಹ್ಮದ್ ಮಾತನಾಡಿದರು. ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್ ಮಾಳೆಕೊಪ್ಪ, ಪದಾಧಿಕಾರಿಗಳಾದ ರಜೀಉರ್ ರೆಹ್ಮಾನ್, ಮುಹಮ್ಮದ್ ಸಾದಿಕ್, ಸಲೀಂ ಖಾದ್ರಿ ಇದ್ದರು.
ಕೊಪ್ಪಳ : ನಗರದ ಎಲ್ಲ ವಾರ್ಡ್ಗಳಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಸಂಘಟನೆಯನ್ನು ಇನ್ನಷ್ಟು ಬಲಿಷ್ಟಗೊಳಿಸುವುದರೊಂದಿಗೆ ಮುಂಬರುವ ನಗರಸಭೆ ಹಾಗೂ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಕೈಗೊಳ್ಳಬೇಕು ಎಂದು ಎಸ್ಡಿಪಿಐ ಪಕ್ಷದ ಜಿಲ್ಲಾ ಉಸ್ತುವಾರಿ ಅಬ್ರಾರ್ ಅಹ್ಮದ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ನಡೆದ ಎಸ್ಡಿಪಿಐ ತಾಲೂಕು ಸಮಿತಿ ಸಭೆಯಲ್ಲಿ ಮಾತನಾಡಿದರು.
ಸ್ಥಳಿಯ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಬಲಪಡಿಸುವುದು, ಪ್ರತಿ ಬೂತ್ನಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ವಾರ್ಡ್ವಾರು ಸಂಘಟನಾ ಚಟುವಟಿಕೆಗಳನ್ನು ವಿಸ್ತರಿಸುವ ಕುರಿತು ಸಭೆಯಲ್ಲಿ ಚರ್ಚಿಸಿ. ನಗರಸಭೆ ಚುನಾವಣೆ ಮತ್ತು 2028ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ತಳಮಟ್ಟದಿಂದಲೇ ಬಲಪಡಿಸುವ ಅಗತ್ಯವಿದೆ. ಇದಕ್ಕಾಗಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಜಾಮುದ್ದೀನ್ ಮಾಳೆಕೊಪ್ಪ, ಜಿಲ್ಲಾ ಕಾರ್ಯದರ್ಶಿ ರಜೀಉರ್ ರೆಹ್ಮಾನ್, ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿ ಮುಹಮ್ಮದ್ ಸಾದಿಕ್, ಎಸ್ಡಿಪಿಐ ತಾಲೂಕು ಅಧ್ಯಕ್ಷ ಸಲೀಂ ಖಾದ್ರಿ ಇತರರಿದ್ದರು.