ಸಿದ್ದಾಪುರದ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಯೋಗ ದಿನ ಆಚರಿಸಲಾಯಿತು. 
ಕೊಪ್ಪಳ

ದಿನದ ಕೆಲಗಂಟೆ ಮೀಸಲಿಡಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಶಿಕ್ಷಕ ಹೇಮಂತ್ ಹೇಳಿಕೆ
  • ಅಂತಾರಾಷ್ಟ್ರೀಯ ಯೋಗದಿನ
ಸಿದ್ದಾಪುರ: ಉತ್ತಮ ಆರೋಗ್ಯಕ್ಕೆ ದಿನದ ಕೆಲಗಂಟೆಗಳ ಕಾಲ ಯೋಗಭ್ಯಾಸ ರೂಢಿಸಿಕೊಳ್ಳಬೇಕು ಎಂದು ಶಿಕ್ಷಕ ಹೇಮಂತ್ ಹೇಳಿದರು.
ಇಲ್ಲಿನ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗದಿನ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವಕರು ದುಶ್ಚಟಗಳಿಂದ ದೂರವಿದ್ದು, ಸದ್ಗುಣಗಳನ್ನು ಅಳವಡಿಸಿಕೊಳ್ಳಬೇಕು. ಏನೇ ಸಾಧನೆ ಮಾಡಬೇಕಾದರೆ ಉತ್ತಮ ಆರೋಗ್ಯ ಹೊಂದಿರಬೇಕು.
ಆದ್ದರಿಂದ ದಿನದ ಸ್ವಲ್ಪ ಸಮಯ ಯೋಗಾಭ್ಯಾಸ ಮಾಡಬೇಕು. ಇಡೀ ವಿಶ್ವಕ್ಕೆ ಯೋಗ ಪರಿಚಯಿಸಿದ ಕೀರ್ತಿ ಭಾರತಕ್ಕಿದೆ ಎಂದರು. ಎಸ್ಡಿಎಂಸಿ ಅಧ್ಯಕ್ಷ ನಾಗರಾಜ ಮಾತನಾಡಿ, ಯೋಗ ಕೇವಲ ದೈಹಿಕ ಕಸರತ್ತಲ್ಲ, ಮನಸ್ಸು ಮತ್ತು ದೇಹವನ್ನು ಸಮತೋಲನದಲ್ಲಿಡುವ ಅತ್ಯುತ್ತಮ ಮಾರ್ಗ ಎಂದು ತಿಳಿಸಿದರು. ನಿವೃತ್ತ ಶಿಕ್ಷಕ ಗುರುಶಾಂತಮೂರ್ತಿ, ಶಿಕ್ಷಕಿ ಹೇಮಾ, ಶ್ರೀಕಾಂತ, ಉರುಕುಂದಮ್ಮ ಇತರರಿದ್ದರು.