ಕೊಪ್ಪಳದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಉದ್ಘಾಟಿಸಿದರು. ಡಿಡಿಪಿಯು ಜಗದೀಶ ಜಿ.ಎಚ್​., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಇದ್ದರು.  
ಕೊಪ್ಪಳ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸಹಕರಿಸಿ

ಪ್ರಮುಖ ಮುಖ್ಯಾಂಶಗಳು

  • ಶೇಖರಗೌಡ ರಾಮತ್ನಾಳ ಮನವಿ
  • ತರಬೇತಿ ಕಾರ್ಯಾಗಾರ
ಕೊಪ್ಪಳ: ನಾವೆಲ್ಲ ಸೇರಿ ಸಮಾಜದಲ್ಲಿ ಮಕ್ಕಳ ಹಕ್ಕುಗಳು ಹಾಗೂ ಅವರ ರಕ್ಷಣಾ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶೇಖರಗೌಡ ರಾಮತ್ನಾಳ ಹೇಳಿದರು.
ನಗರದ ಜಿಪಂ ಜೆ.ಎಚ್​.ಪಟೇಲ್​ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ವಿಕಲಚೇತನರ ವಿವಿದ್ದೋಶ ಪುನರ್ವಸತಿ ಕಾರ್ಯಕರ್ತರಿಗೆ ಬುಧವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡದಿರು.
ನಮ್ಮ ದೇಶ ವಿಶ್ವ ಸಂಸ್ಥೆಯೊಂದಿಗೆ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಸಹಿ ಹಾಕಿದೆ. ಮಕ್ಕಳ ಹಕ್ಕುಗಳ ರಕ್ಷಣೆಗೆ ಕಾನೂನು ರಚಿಸಿ ಅನುಷ್ಠಾನಗೊಳಿಸಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು, ಶೋಷಣೆ ವಿರುದ್ಧದ ಹಕ್ಕು, ಲೈಂಗಿಕ ಅಪರಾಧಗಳಿಂದ ರಕ್ಷಣೆ ಕಾಯ್ದೆ ಜಾರಿಗೊಳಿಸಿದೆ. ವಿಶೇಷ ಚೇತನ ಮಕ್ಕಳ ಕಲ್ಯಾಣಕ್ಕಾಗಿ ಗ್ರಾಪಂ ಮತ್ತು ಸ್ಥಳಿಯ ಸರ್ಕಾರಗಳ ಅನುದಾನದಲ್ಲಿ ಶೇ.5ರಷ್ಟು ಮೀಸಲಿಟ್ಟು ಕಾರ್ಯಕ್ರಮ ರೂಪಿಸಲು ಅವಕಾಶ ನೀಡಿದೆ. ಮಕ್ಕಳ ಹಕ್ಕುಗಳ ಉಲ್ಲಂನೆಯಾದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ದೂ.ಸಂ: 080-&22115290/92 ಗೆ ಅಥವಾ ಡಿಡಿಡಿ.ಠ್ಚಟ್ಚ್ಟ.ಚ್ಟ್ಞಚಠಿಚಚ.ಜಟಡ.ಜ್ಞಿ ಮೂಲಕ ದೂರು ನೀಡಬಹು ಎಂದರು.
ಡಿವೈಎಸ್ಪಿ ಮುತ್ತಣ್ಣ ಸರವಗೋಳ ಮಾತನಾಡಿ, ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ, ಭಿಾಟನೆ, ಮಾದಕ ವಸ್ತುಗಳ ಸಾಗಣೆಗೆ ಬಳಕೆ, ಅಕ್ರಮ ದತ್ತು ಪಡೆಯುವಿಕೆ, ಮಾರಾಟ ಶಿಾರ್ಹ ಅಪರಾಧ. ಪ್ರತಿ ಪೊಲೀಸ್​ ಠಾಣೆಯ ಆರಕ್ಷಕ ಉಪ ನಿರೀಕ್ಷಕರನ್ನು ಮಕ್ಕಳ ಕಲ್ಯಾಣ ಪೊಲೀಸ್​ ಅಧಿಕಾರಿಗಳೆಂದು ಗುರುತಿಸಲಾಗಿದೆ. ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಕ್ಕಳನ್ನು ಪೊಲೀಸ್​ ಅಧಿಕಾರಿ ಬಳಿ ಹಾಜರುಪಡಿಸಬಹುದು. ಕಾನೂನು ಸಂರ್ಷಕ್ಕೆ ಒಳಗಾದ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯಿಂದ ಅಗತ್ಯ ಪುನರ್ವಸತಿ ಕಲ್ಪಿಸಲಾಗುವುದೆಂದರು.
ಡಿಡಿಪಿಯು ಜಗದೀಶ ಜಿ.ಎಚ್​., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಕಾಶ ಕಡಗದ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಮಾತನಾಡಿದರು. ಯುನಿಸ್​ೆ ಮಕ್ಕಳ ರಕ್ಷಣಾ ಯೋಜನೆ ಪ್ರಾದೇಶಿಕ ಸಂಯೋಜಕ ಡಾ.ರಾವೇಂದ್ರ ಭಟ್​, ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಮಕ್ಕಳ ಸಂಬಂಧಿ ಕಾನೂನುಗಳ ಕುರಿತು ತರಬೇತಿ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಪ್ರತಿಭಾ ಕಾಶಿಮಠ, ರವಿ ಬಡಿಗೇರ, ದೇವರಾಜ ತಿಲಗರ ಇತರರಿದ್ದರು.