ಶ್ರೀ ಹುಲಿಗೆಮ್ಮ ದೇವಿ ದರ್ಶನಕ್ಕಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತಿರುವುದು. ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಿರುವುದು.
- ಪರಿಹಾರವಾಗದ ಪಾರ್ಕಿಂಗ್ ಸಮಸ್ಯೆ
- ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ
ಮುನಿರಾಬಾದ್: ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಮಂಗಳವಾರ ವಿಶೇಷ ಪೂಜೆ ನೆರವೇರಿತು. ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ದ್ವಿತೀಯ ವಿಶೇಷ ಮಂಗಳವಾರ ಹಿನ್ನೆಲೆಯಲ್ಲಿ ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನ ಮಾಡಿ ದೇವಿಗೆ ಹೂ, ಹಣ್ಣು, ನೈವೇದ್ಯ ಸಲ್ಲಿಸಿ ಭಕ್ತಿ ಸಮರ್ಪಿಸಿದರು.
ಶಾಶ್ವತ ಕ್ರಮವಾಗಲಿ: ಜಾತ್ರೆ ಹಿನ್ನೆಲೆಯಲ್ಲಿ ಹುಲಿಗಿ ಗ್ರಾಮದಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ವಾಹನಗಳಿಗೆ ಸೂಕ್ತ ಪಾಕಿರ್ಂಗ್
ವ್ಯವಸ್ಥೆ ಇಲ್ಲದ ಕಾರಣ ಭಕ್ತರು ಅನಿವಾರ್ಯವಾಗಿ ರಸ್ತೆಬದಿ ಹಾಗೂ ಸಮೀಪದ ಭತ್ತದ ಗದ್ದೆಗಳಲ್ಲಿ ವಾಹನಗಳನ್ನು ನಿಲ್ಲಿಸಿ ದೇವಸ್ಥಾನಕ್ಕೆ ತೆರಳಿದರು. ಆಡಳಿತ ಮಂಡಳಿ ಶಾಶ್ವತ ಪಾಕಿರ್ಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.