ಅಜ್ಜಪ್ಪ ಸಪಲಗದ 
ಕೊಪ್ಪಳ

ಡಾ.ಬಿ.ಆರ್​.ಅಂಬೇಡ್ಕರ್​ ಜನ್ಮ ದಿನಾಚರಣೆ 14ಕ್ಕೆ

ಪ್ರಮುಖ ಮುಖ್ಯಾಂಶಗಳು

  • ಸಮಾಜ ಕಲ್ಯಾಣ ಡಿಡಿ ಅಜ್ಜಪ್ಪ ಹೇಳಿಕೆ
ಕೊಪ್ಪಳ: ಜಿಲ್ಲಾ ಕೇಂದ್ರದಲ್ಲಿ ಮಹಾನ್​ ಮಾನವತಾವಾದಿ, ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್​. ಅಂಬೇಡ್ಕರ್​ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏಪ್ರಿಲ್​ 14 ರಂದು ಬೆಳಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮದ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹನುಮಗೌಡ ಪಾಟೀಲ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರು, ಶಾಸಕರು, ವಿಪ ಸದಸ್ಯರು ಹಾಗೂ ನಗರ-ಸ್ಥಳಿಯ ಪ್ರಾಧಿಕಾರದ ಅಧ್ಯಕ್ಷರುಗಳು ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಿ. ರಂದೀಪ್​, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ. ಮೋಹನರಾಜ್​, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಡಾ. ರಾಕೇಶ್​ ಕುಮಾರ್​ ಕೆ. ಪಾಲ್ಗೊಳ್ಳುವರು. ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ರಾಮಸಾಗರ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಸುಗ್ಗೇನಹಳ್ಳಿ ರಮೇಶ್​ ಡಾ. ಬಿ.ಆರ್​. ಅಂಬೇಡ್ಕರ್​ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 8 ಗಂಟೆಗೆ ಕೊಪ್ಪಳ ನಗರದ ಡಾ. ಬಿ.ಆರ್​. ಅಂಬೇಡ್ಕರ್​ ಸರ್ಕಲ್​ನಿಂದ ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ಡಾ. ಬಿ.ಆರ್​. ಅಂಬೇಡ್ಕರ್​ ಅವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ತಿಳಿಸಿದ್ದಾರೆ.