ಶಿವಾನಂದಯ್ಯ 
ಕೊಪ್ಪಳ

ಅಕ್ರಮ ಮರಳು ಸಾಗಾಣಿಕೆ ತಡೆಯಿರಿ

ಪ್ರಮುಖ ಮುಖ್ಯಾಂಶಗಳು

  • ಶಿವಾನಂದಯ್ಯ ರಾಮಯ್ಯ ಆಗ್ರಹ
ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ ಹಲವಾಗಲಿ ಮತ್ತು ಕೇಸಲಾಪೂರ ಗ್ರಾಮಗಳ ವ್ಯಾಪ್ತಿಯ ತುಂಗಭದ್ರಾ ನದಿಯಿಂದ ನಡೆಯುತ್ತಿರುವ ಅಕ್ರಮ ಮರಳು ಮತ್ತು ಮಣ್ಣು ಗಣಿಗಾರಿಕೆಯನ್ನು ಕೂಡಲೇ ಸ್ಥಗಿತಗೊಳಿಸಬೇಕು ಎಂದು ಗ್ರಾಮಸ್ಥ ಶಿವಾನಂದಯ್ಯ ರಾಮಯ್ಯ ಗುರುವಿನ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪರವಾನಗಿ ಇಲ್ಲದೆ ರಾತ್ರಿ ವೇಳೆ ರಾಜಾರೋಷವಾಗಿ ಮರಳು ಸಾಗಾಣಿಕೆ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲ ಕುಸಿದು ಸಾವಿರಾರು ರೈತ ಕುಟುಂಬಗಳ ಕೊಳವೆಬಾವಿಗಳು ಬತ್ತಿ ಹೋಗಿವೆ. ಅತಿಯಾದ ಧೂಳು ಮತ್ತು ಶಬ್ದ ಮಾಲಿನ್ಯದಿಂದ ಶಾಲಾ ಮಕ್ಕಳು ಹಾಗೂ ವೃದ್ಧರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರು.
ಅಕ್ರಮವನ್ನು ಪ್ರಶ್ನಿಸಿದರೆ ಮರಳು ಮಾಫಿಯಾದವರು ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದ. ಸಂಬಂಧಪಟ್ಟ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸ್​ ಅಧಿಕಾರಿಗಳು ಮರಳು ಮಾಫಿಯಾದೊಂದಿಗೆ ಶಾಮೀಲಾಗಿದ್ದಾರೆ ಎಂದು ದೂರಿದರು. ಕೂಡಲೇ ಅಕ್ರಮ ಸಾಗಾಣಿಕೆ ತಡೆಯದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.