ಅಳವಂಡಿ ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಭಾಷಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಆರೋಗ್ಯ ಇಲಾಖೆ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ, ಶಿಕ್ಷಕರಾದ ಮರ್ದಾನಲಿ ಗಡಾದ, ಗಿರಿಯಪ್ಪ ಹಾರನಹಳ್ಳಿ, ರವಿಕಿರಣ್ ಟಿಕಾರೆ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ ಇತರರಿದ್ದರು. 
ಕೊಪ್ಪಳ

ತಂಬಾಕುಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

ಪ್ರಮುಖ ಮುಖ್ಯಾಂಶಗಳು

  • ರಾಷ್ಟ್ರೀಯ ತಂಬಾಕು ನಿಯಂತ್ರಣ

ತಂಬಾಕುಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿ

ಅಳವಂಡಿ: ದೇಶದಲ್ಲಿ 2019-20ರ ಆರೋಗ್ಯ ಸಮೀಕ್ಷೆ ಪ್ರಕಾರ ಶೇ.8.5 ಮಹಿಳೆಯರು ಮತ್ತು ಶೇ.26 ಪುರುಷರು ತಂಬಾಕು ಸೇವನೆ ಮಾಡುತ್ತಿದ್ದು, ಕ್ಯಾನ್ಸರ್ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ ತಿಳಿಸಿದರು.
ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಂಬಾಕುಮುಕ್ತ ಯುವ ಅಭಿಯಾನ 3.0 ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರು ತಂಬಾಕು ಸೇವಿಸುವುದರಿಂದ ಹುಟ್ಟುವ ಮಕ್ಕಳು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಾರೆ. ಮಕ್ಕಳು ಶಿಕ್ಷಣವಂತರಾಗಿ ತಂಬಾಕುಮುಕ್ತ ಸಮಾಜ ನಿರ್ಮಾಣದತ್ತ ಗಮನಹರಿಸಬೇಕು ಎಂದರು. ವಿಜ್ಞಾನ ಶಿಕ್ಷಕ ಮರ್ದಾನಲಿ ಗಡಾದ ಮಾತನಾಡಿ, ಸದೃಢ ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಮುಖ್ಯವಾಗಿದೆ ಎಂದರು. ತಂಬಾಕು ನಿಯಂತ್ರಣ ಕುರಿತ ಭಾಷಣ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.