ಗಂಗಾವತಿ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಸಂಸತ್ ಚುನಾವಣೆಯಲ್ಲಿ ಆಧಾರ್ ಕಾರ್ಡ್‌ನೊಂದಿಗೆ ಮತ ಚಲಾಯಿಸಲು ಸರದಿಯಲ್ಲಿ ನಿಂತ ವಿದ್ಯಾರ್ಥಿಗಳು. 
ಕೊಪ್ಪಳ

ಪ್ರಜಾಪ್ರಭುತ್ವ ಪಾಠ ಕಲಿತ ವಿದ್ಯಾರ್ಥಿಗಳು

ರುದ್ರಪ್ಪ ವಾಲಿ

ಪ್ರಮುಖ ಮುಖ್ಯಾಂಶಗಳು

  • ಪರಿಶೀಲನೆ
  • ಯಾವುದೇ
  • ನಾಮಪತ್ರ
ಗಂಗಾವತಿ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಮತದಾನದ ಮಹತ್ವ ಹಾಗೂ ಸಂವಿಧಾನದ ಅರಿವು ಮೂಡಿಸುವ ಉದ್ದೇಶದಿಂದ ನಗರದ ಲಿಟಲ್ ಹಾರ್ಟ್ಸ್ ಶಾಲೆಯಲ್ಲಿ ಸೋಮವಾರ ಶಾಲಾ ಸಂಸತ್ ಚುನಾವಣೆ ಮಾದರಿಯಾಗಿ ಆಯೋಜಿಸಲಾಯಿತು.
ಚುನಾವಣೆ ಆಯೋಗದ ಮಾದರಿಯಲ್ಲೇ ಮತದಾನ ವ್ಯವಸ್ಥೆ ಕಲ್ಪಿಸಲಾಗಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪೊಲೀಸ್ ಬಂದೋಬಸ್ತಿನ ಅಣಕು ಪ್ರದರ್ಶನ ನಡೆಸುವ ಮೂಲಕ ಚುನಾವಣಾ ವಾತಾವರಣ ಸೃಷ್ಟಿಸಿದರು. ಸಂಸತ್ತಿನ 10 ವಿವಿಧ ಹುದ್ದೆಗಳಿಗೆ ಆರಂಭದಲ್ಲಿ 103 ವಿದ್ಯಾರ್ಥಿಗಳು ನಾಮಪತ್ರ ಸಲ್ಲಿಸಿದ್ದರು.
ಪರಿಶೀಲನೆ ವೇಳೆ ಯಾವುದೇ ನಾಮಪತ್ರ ತಿರಸ್ಕೃತವಾಗದೆ, 33 ಅಭ್ಯರ್ಥಿಗಳು ತಮ್ಮ ನಾಮಪತ್ರ ಹಿಂಪಡೆದ ಹಿನ್ನೆಲೆಯಲ್ಲಿ ಅಂತಿಮವಾಗಿ 70 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದರು. ಒಟ್ಟು 700 ವಿದ್ಯಾರ್ಥಿಗಳು ಮತ ಚಲಾಯಿಸಿದರು.
ಈ ಸಂದರ್ಭದಲ್ಲಿ ಶಾಲಾಡಳಿತ ಮಂಡಳಿ ಕಾರ್ಯದರ್ಶಿ ಜಗನ್ನಾಥ ಆಲ್ಲಂಪಲ್ಲಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ, ಮತದಾನದ ಮಹತ್ವ ಹಾಗೂ ಶಾಲಾ ಸಂಸತ್ತಿನ ಔಚಿತ್ಯವನ್ನು ವಿವರಿಸಿದರು. ಮುಖ್ಯಶಿಕ್ಷಕಿ ಎಂ. ಪ್ರಿಯಾಕುಮಾರಿ ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.