ಕನಕಗಿರಿ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ಮುಂದೆ ದಿಢೀರ್ ಪ್ರತಿಭಟನೆ ನಡೆಸಲಾಯಿತು. ವಿದ್ಯಾರ್ಥಿಗಳಾದ ಸುರೇಶ ಚವ್ಹಾಣ್, ಪ್ರಕಾಶ ಬೇರಗಿ ಇತರರಿದ್ದರು. 
ಕೊಪ್ಪಳ

ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ

ಶಾಮಸುಂದರ್ ಕೊಪ್ಪಳಕರ್
ಕನಕಗಿರಿ: ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಮೂಲ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಭಾನುವಾರ ಹಾಸ್ಟೆಲ್ ಮುಂದೆ ದಿಢೀರ್ ಪ್ರತಿಭಟನೆ ನಡೆಸಲಾಯಿತು.
ವಸತಿ ನಿಲಯದಲ್ಲಿ ಕುಡಿಯುವ ನೀರು, ಹಾಸಿಗೆ, ಬೆಂಚ್ ಇಲ್ಲವಾಗಿದೆ. ಮೆನು ಪ್ರಕಾರ ಊಟ ನೀಡುತ್ತಿಲ್ಲ. ಅಲ್ಲದೇ ಊಟ ಶುಚಿಯಾಗಿರುವುದಿಲ್ಲ. ಮಳೆ ಬಂದರೆ, ವಸತಿ ನಿಲಯ ಸೋರುತ್ತದೆ. ಹಾಸ್ಟೆಲ್‌ನಲ್ಲಿನ ಸಮಸ್ಯೆಗಳ ಬಗ್ಗೆ ಹಲವು ಬಾರಿ ಮೇಲಧಿಕಾರಿಗಳಿಗೆ ಪತ್ರ ಬರೆದು ತಿಳಿಸಲಾಗಿದೆ. ಆದರೆ ಈ ವರೆಗೂ ಸಮಸ್ಯೆ ಇತ್ಯರ್ಥಪಡಿಸಲು ಅಧಿಕಾರಿಗಳು ಮುಂದಾಗುತ್ತಿಲ್ಲ. ಸಹಾಯಕ ನಿರ್ದೇಶಕರಿಗೆ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ನಮ್ಮ ಬೇಡಿಕೆ ಈಡೇರಿಸುವವರೆಗೂ ನಾವುಗಳು ಪ್ರತಿಭಟನೆ ಮಾಡುತ್ತೇವೆ ಎಂದು ವಿದ್ಯಾರ್ಥಿಗಳು ತಿಳಿಸಿದರು.
ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವಕುಮಾರ ಈಚನಾಳ, ವಿದ್ಯಾರ್ಥಿಗಳಾದ ಸುರೇಶ ಚವ್ಹಾಣ್, ಪ್ರಕಾಶ ಬೇರಗಿ, ಶಶಿಕುಮಾರ್, ಕುಬೇರ್ ಸುಳೇಕಲ್, ಹೇಮರಾಜ ಇತರರಿದ್ದರು.