ಸಿದ್ದಾಪುರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವಣ್ಣಯ್ಯ, ಆಶಾ ಕಾರ್ಯಕರ್ತೆಯರು ಇದ್ದರು. 
ಕೊಪ್ಪಳ

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಹಕರಿಸಿ

ಗಾಯತ್ರಿ ಮಾಲಿಪಾಟೀಲ್

ಪ್ರಮುಖ ಮುಖ್ಯಾಂಶಗಳು

  • ಪಲ್ಸ್ ಪೋಲಿಯೋ
  • ಅಭಿಯಾನ

ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಹಕರಿಸಿ

ಸಿದ್ದಾಪುರ: ಭಾರತವನ್ನು ಪೋಲಿಯೋಮುಕ್ತಗೊಳಿಸಲು ಆರೋಗ್ಯ ಇಲಾಖೆ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಂಡಿದ್ದು, ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಶಾಂತ ಹೇಳಿದರು.
ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕುರಿತ ಜನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿವಿಧ ರಾಷ್ಟ್ರಗಳಲ್ಲಿ ಇಂದಿಗೂ ಪೋಲಿಯೋ ಜನರನ್ನು ಬಾಧಿಸುತ್ತಿದೆ. ಆದ್ದರಿಂದ ಭಾರತವನ್ನು ಪೋಲಿಯೋಮುಕ್ತವಾಗಿಸಲು ನಿರ್ಧರಿಸಲಾಗಿದೆ. ಈ ನಿಮಿತ್ತ ಡಿ.21ರಂದು 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ 2 ಹನಿ ಪೋಲಿಯೋ ಹಾಕಿಸಬೇಕು.
ಬೆಳಗ್ಗೆ 8ರಿಂದ ಸಂಜೆ 5 ಗಂಟೆವರೆಗೆ ಸಿಲಕಾ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಸಹಕರಿಸಿದರೆ ಯಶಸ್ವಿ ಮಾಡಬಹುದು. ಡಿ.22ರಿಂದ 24ರವರೆಗೆ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಪೋಲಿಯೋ ಹಾಕಲಿದ್ದಾರೆ ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರೇಖಾ, ಆರೋಗ್ಯ ನಿರೀಕ್ಷಣಾಧಿಕಾರಿ ಬಸವಣ್ಣಯ್ಯ, ಆಶಾ ಕಾರ್ಯಕರ್ತೆಯರು ಇದ್ದರು.