ಮಾಲಗಿತ್ತಿ ಗ್ರಾಪಂ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರ್ಹ ಫಲಾನುಭವಿಗಳಿಗೆ ರೇಷನ್ ಕಾರ್ಡ್ ವಿತರಿಸಲಾಯಿತು. ಪಿಡಿಒ ಪ್ರಶಾಂತ ಹಿರೇಮಠ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಫಾರೂಕ್ ಡಾಲಾಯತ್, ಸದಸ್ಯ ಮಂಜುನಾಥ ತೇವರನ್ನವರ, ಜಿಲ್ಲಾ ಪ್ರಾಧಿಕಾರ ಉಪಾಧ್ಯಕ್ಷ ಅಮರೇಶ ಗಾಂಜಿ ಇತರರಿದ್ದರು. 
ಕೊಪ್ಪಳ

ಗ್ಯಾರಂಟಿ ಯೋಜನೆ ಸದುಪಯೋಗ ಪಡೆಯಿರಿ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ಸಮಿತಿ ತಾಲೂಕು ಅಧ್ಯಕ್ಷ ಫಾರೂಕ್ ಡಾಲಾಯತ್ ಮನವಿ
  • ಹನುಮಸಾಗರ ಮಾಲಗಿತ್ತಿ ಗ್ಯಾರಂಟಿ ಪರಿಶೀಲನಾ ಸಭೆ
ಹನುಮಸಾಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂದು ಗ್ಯಾರಂಟಿ ಯೋಜನೆಗಳ ಸಮಿತಿ ತಾಲೂಕು ಅಧ್ಯಕ್ಷ ಫಾರೂಕ್ ಡಾಲಾಯತ್ ಹೇಳಿದರು.
ಸಮೀಪದ ಮಾಲಗಿತ್ತಿ ಗ್ರಾಪಂ ಕಾರ್ಯಾಲಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಗ್ರಾಪಂ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿಯೊಂದು ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುತ್ತಿದ್ದು, ಇದರ ಜತೆಗೆ ಫಲಾನುಭವಿಗಳ ಸಮ್ಮುಖದಲ್ಲಿ ಯೋಜನೆಗಳ ಶಿಬಿರ ನಡೆಸಲಾಗುತ್ತಿದೆ. ಶಿಬಿರದಲ್ಲಿ ಫಲಾನುಭವಿಗಳ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿ ರೇಷನ್ ಕಾರ್ಡ್ ವಿತರಣೆ, ಹೊಸ ಅರ್ಜಿ ಸಲ್ಲಿಸುವುದು, ಫಲಾನುಭವಿಗಳೊಂದಿಗೆ ಚರ್ಚಿಸುವುದು ಶಿಬಿರದ ಪ್ರಮುಖ ಉದ್ದೇಶವಾಗಿದೆ. ಅರ್ಹ ಫಲಾನುಭವಿಗಳು ಗ್ಯಾರಂಟಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ 15ಕ್ಕೂ ಹೆಚ್ಚು ಹೊಸ ರೇಷನ್ ಕಾರ್ಡ್‌ಗಳನ್ನು ಸಮಿತಿ ನೇತೃತ್ವದಲ್ಲಿ ನೀಡಲಾಯಿತು. ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಮಂಜುನಾಥ ತೇವರನ್ನವರ, ಜಿಲ್ಲಾ ಪ್ರಾಧಿಕಾರ ಉಪಾಧ್ಯಕ್ಷ ಅಮರೇಶ ಗಾಂಜಿ, ಪಿಡಿಒ ಪ್ರಶಾಂತ ಹಿರೇಮಠ, ಪ್ರಮುಖರಾದ ಹುಸೇನ್ ಕಾಯಿಗಡ್ಡಿ, ವೀರಬಸಯ್ಯ ಕಾಡಗಿಮಠ, ನರಸಪ್ಪ ಬಿಂಗಿ, ಶೋಭಾ ಪುರ್ತಗೇರಿ, ಉಮಾದೇವಿ ಹಾಗೂ ಅನುಷ್ಠಾನಧಿಕಾರಿಗಳು ಇತರರಿದ್ದರು.