ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ರಚನೆ ಸಂಬಂಧ ಗುರುವಾರ ಕೊಪ್ಪಳದಲ್ಲಿ ಡಿಸಿ ಡಾ.ಸುರೇಶ ಬಿ.ಇಟ್ನಾಳ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಪಂ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಸಮಾಜ ಕಲ್ಯಾಣ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಇತರರಿದ್ದರು.
- ಡಿಸಿ ಡಾ.ಸುರೇಶ ಬಿ.ಇಟ್ನಾಳ ಸೂಚನೆ
- ವಿವಿಧ ಅಧಿಕಾರಿಗಳೊಂದಿಗೆ ಸಭೆ
ಕೊಪ್ಪಳ: ಹೊರಗುತ್ತಿಗೆ ನೌಕರರಿಗಾಗಿ ಜಿಲ್ಲೆಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ರಚನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂ ರಚಿಸುವ ಸಂಬಂಧ ಗುರುವಾರ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.
ವಿವಿಧ ಇಲಾಖೆಗಳು, ನಿಗಮ, ಮಂಡಳಿಯಡಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರಿಗಾಗಿ ಬೀದರ್ ಜಿಲ್ಲೆಯಲ್ಲಿ ರಚಿಸದಂತೆ ಕೊಪ್ಪಳದಲ್ಲೂ ರಚಿಸಿ. ಇದರಿಂದ ಹೊರಗುತ್ತಿಗೆ ನೌಕರರ ವೇತನ ಪಾವತಿ, ಶಾಸನಾತ್ಮಕವಾಗಿ ನೀಡಬೇಕಾದ ಸೌಲಭ್ಯಗಳ ಕುರಿತ ಸಮಸ್ಯೆ ನಿವಾರಣೆ ಆಗಲಿದೆ. ಒಂದು ಸಾವಿರ ನೌಕರರ ನೋಂದಣಿಗೆ ಅವಕಾಶವಿದೆ. ವಿವಿಧ ಇಲಾಖೆ ಮುಖ್ಯಸ್ಥರು ಕಾರ್ಮಿಕ ಇಲಾಖೆಗೆ ಮಾಹಿತಿ ನೀಡಿ. ಸರ್ಕಾರದ ಮಾರ್ಗಸೂಚಿ, ಸಭೆ ನಡಾವಳಿ ಆಧರಿಸಿ ಬೈಲಾ ಸಿದ್ಧಪಡಿಸಿ ಕ್ರಮ ಕೈಗೊಳ್ಳಿ. ಸಂ ರಚನೆಗೆ ಅವಕಾಶವಿದೆ. ಉಳಿದಂತೆ ವಿವಿಧ ಸಂಸ್ಥೆ, ಸಂಟನೆಗಳಿಂದ ನ್ಯಾಯಾಲಯದಲ್ಲಿ ದಾಖಲಾದ ಪ್ರಕರಣಗಳ ತೀರ್ಪು ಆಧರಿಸಿ ಕಾರ್ಯಚಟುವಟಿಕೆ ನಡೆಸಲಾಗುವುದೆಂದು ತಿಳಿಸಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಇಲಾಖೆ ಅಧಿಕಾರಿಗಳು ಗುತ್ತಿಗೆ ನೌಕರರ ವಿವರ, ಗುತ್ತಿಗೆ ಕಂಪನಿ, ಅವಧಿ ವಿವರ ಸರಿಯಾಗಿ ಸಲ್ಲಿಸುವಂತೆ ಸೂಚಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಮಾತನಾಡಿ, ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಇರಲಿದೆ. ಜಿಪಂ ಸಿಇಒ ಕಾರ್ಯದರ್ಶಿ, ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿರುವರು. ಐವರು ಚುನಾಯಿತ ಸದಸ್ಯರು ನಿರ್ದೇಶಕರಾಗಿರುವರೆಂದು ಮಾಹಿತಿ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೋಸೈಟಿ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ್ ಸಂ ರಚನೆ, ಉದ್ದೇಶ, ಸರ್ಕಾರದ ನಿರ್ದೇಶನಗಳನ್ನು ವಿವರಿಸಿದರು.
ಸಮಾಜ ಕಲ್ಯಾಣ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಡಿಎಚ್ಒ ಡಾ.ಟಿ,ಲಿಂಗರಾಜು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಪುಷ್ಪಲತಾ, ಕಾರ್ಮಿಕ ನಿರೀಕ್ಷಕರಾದ ಮಂಜುಳಾ, ಅಶೋಕ ಮಣಿಗಾರ ಇತರರಿದ್ದರು.