ಕುಕನೂರು ಕೆಎಲ್‌ಇ ಪದವಿಪೂರ್ವ ಮಹಾವಿದ್ಯಾಲಯಲ್ಲಿ ಆಯೋಜಿಸಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮವನ್ನು ನಿವೃತ್ತ ಪ್ರಾಚಾರ್ಯ ಕೆ.ಎಚ್.ಛತ್ರದ ಉದ್ಘಾಟಿಸಿದರು. ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಯಂಕಣ್ಣ ಯರಾಶಿ, ಪ್ರಾಚಾರ್ಯ ಅರುಣ್ ಕುಮಾರ್ ಹಿರೇಮಠ ಇದ್ದರು.
- ಜಾಗತಿಕ
- ದಿನಮಾನಗಳಲ್ಲಿ
- ತಂತ್ರಜ್ಞಾನ
ಕುಕನೂರು: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಉನ್ನತ ಸ್ಥಾನ ಪಡೆಯಬೇಕು ಎಂದು ನಿವೃತ್ತ ಪ್ರಾಚಾರ್ಯ ಕೆ.ಎಚ್.ಛತ್ರದ ಹೇಳಿದರು.
ಕೆಎಲ್‌ಇ ಪದವಿಪೂರ್ವ ಮಹಾವಿದ್ಯಾಲಯಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದರು. ವಿದ್ಯಾರ್ಥಿಗಳು ಶಿಸ್ತು ಮತ್ತು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಜಾಗತಿಕ ದಿನಮಾನಗಳಲ್ಲಿ ತಂತ್ರಜ್ಞಾನ ಆಧಾರಿತ ಶಿಕ್ಷಣವನ್ನು ಪಡೆದರೆ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದರು.
ಕಾಲೇಜು ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಯಂಕಣ್ಣ ಯರಾಶಿ ಮಾತನಾಡಿ, ನಮ್ಮ ಸಂಸ್ಥೆ ಕಲಾ, ವಿಜ್ಞಾನ, ವಾಣಿಜ್ಯ ವಿಭಾಗಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಪಾಸಾಗಿ ಕಾಲೇಜಿಗೆ ಕೀರ್ತಿ ತರುತ್ತಿದ್ದಾರೆ ಎಂದರು.
ಪ್ರಾಚಾರ್ಯ ಅರುಣ್ ಕುಮಾರ್ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಶರಣಪ್ಪ ಉಮಚಗಿ, ಎಸ್.ಎಸ್.ರಾಜೂರ, ಕೆ.ಎ.ಬೇವೂರ, ವಿದ್ಯಾರ್ಥಿಗಳಾದ ಶಾಂತಮ್ಮ ಕಳ್ಳಿಮಠ, ವೀಣಾ ಕನಕಗಿರಿ, ಎಚ್.ಭಾಗ್ಯ ಇತರರಿದ್ದರು.