ಕನಕಗಿರಿ ಶಿರಸ್ತೇದಾರ್ ಶರಣಪ್ಪಗೆ ಎಸ್‌ಎಫ್‌ಐ ಮನವಿ ಸಲ್ಲಿಸಿತು. ಜಿಲ್ಲಾ ಸಹ ಕಾರ್ಯದರ್ಶಿ ಬಸಯ್ಯ ಹಿರೇಮಠ ಸಮಿತಿ ಸದಸ್ಯ ಮಾರುತಿ, ಪ್ರಮುಖರಾದ ಗ್ಯಾನೇಶ್ ಕಡಗದ ಪ್ರಗತಿಪರ ಸಂಘಟನೆ ಮುಖಂಡರಾದ ಪಾಮಣ್ಣ ಅರಳಿಗನೂರ್, ಹೊಸಗೆರಪ್ಪ ಇತರರಿದ್ದರು.
- ಕನಕಗಿರಿ
- ವಿದ್ಯಾರ್ಥಿಗಳಿಂದ
- ಪ್ರತಿಭಟನೆ
ಕನಕಗಿರಿ: ಐದು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳನ್ನು ಸರ್ಕಾರ ಮುಚ್ಚುತ್ತಿರುವುದನ್ನು ಖಂಡಿಸಿ ಎಸ್‌ಎಫ್‌ಐ ಸಂಘಟನೆ ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಶಿರಸ್ತೇದಾರ್ ಶರಣಪ್ಪ ಅವರಿಗೆ ಮನವಿ ಸಲ್ಲಿಸಿತು.
ತಾಲೂಕು ಅಧ್ಯಕ್ಷ ಹನುಮೇಶ್ ಮ್ಯಾಗಡೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (ಶೇ.19)ಕುಸಿದಿದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು ಶೇ. 46 ರಿಂದ ಶೇ.38ಕ್ಕೆ ಕುಸಿದಿದೆ. ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ ಶೇ.29 ಹೆಚ್ಚಾಗಿದೆ.
ಸರ್ಕಾರ ಒಟ್ಟಿನಲ್ಲಿ ಶಾಲೆಗಳನ್ನು ಖಾಸಗಿಯವರಿಗೆ ಸಂಘ ಸಂಸ್ಥೆಯವರಿಗೆ ಬಿಟ್ಟು ಕೊಡುವ ಪ್ರಯತ್ನ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.