ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರೋತ್ಸವದ ನಿಮಿತ್ತ ನಡೆಯಲಿರುವ ಮಹಾದಾಸೋಹಕ್ಕೆ ಸಂಸದ ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು. ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್.ಪ್ರಕಾಶ್‌ರಾವ್, ಸದಸ್ಯರಾದ ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಇಳಿಗೇರ್, ಶರಣಗೌಡ ಪಾಟೀಲ್ ಇತರರಿದ್ದರು. 
ಕೊಪ್ಪಳ

ಸಾರ್ವಜನಿಕರು ಅಧಿಕಾರಿಗಳ ಸೂಚನೆ ಪಾಲಿಸಲಿ

ಪ್ರಮುಖ ಮುಖ್ಯಾಂಶಗಳು

  • ಸೂಚನೆ ಪಾಲಿಸಲಿ

ಸಾರ್ವಜನಿಕರು ಅಧಿಕಾರಿಗಳ ಸೂಚನೆ ಪಾಲಿಸಲಿ

ಮುನಿರಾಬಾದ್: ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಮೇ 11ರಿಂದ 14 ರವರೆಗೆ ನಡೆಯಲಿದ್ದು, ಭಕ್ತರಿಗೆ ಅಗತ್ಯ ಸೌಕರ್ಯಗಳ ಜತೆ ಸಕಲ ಸಿದ್ಧತೆ ಪೂರ್ಣಗೊಳಿಸಲಾಗಿದೆ ಎಂದು ಕೊಪ್ಪಳ ಸಂಸದ ಕೆ.ರಾಜಶೇಖರ ಹಿಟ್ನಾಳ ಹೇಳಿದರು.
ಶ್ರೀ ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿ ಉತ್ಸವದ ವಿಶೇಷತೆ ಹಾಗೂ ಭಕ್ತರಿಗಾಗಿ ಕೈಗೊಳ್ಳಲಾದ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.
ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ, ಶಾಸಕರು ಹಾಗೂ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಸುಮಾರು 35 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಸಿಸಿಕ್ಯಾಮರಾ, ನಿಯಂತ್ರಣ ಕೊಠಡಿ ಹಾಗೂ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ದೇವಸ್ಥಾನದ ಆವರಣದಲ್ಲಿ ವಿದ್ಯುತ್ ಅಲಂಕಾರ, ರಸ್ತೆ ದುರಸ್ತಿ, ಶುದ್ಧ ಕುಡಿವ ನೀರು ಮತ್ತು ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆಗಾಗಿ ತಾತ್ಕಾಲಿಕ ವೈದ್ಯಕೀಯ ಶಿಬಿರಗಳು, ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ದಳದ ವಾಹನಗಳು ಸನ್ನದ್ಧ ಸ್ಥಿತಿಯಲ್ಲಿವೆ.
ಜಾತ್ರೆಗೆ ಆಗಮಿಸುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಜಿಲ್ಲಾಡಳಿತ ಮತ್ತು ದೇವಸ್ಥಾನ ಪ್ರಾಧಿಕಾರ ಶ್ರಮಿಸುತ್ತಿದೆ. ಸಾರ್ವಜನಿಕರು ಅಧಿಕಾರಿಗಳ ಸೂಚನೆ ಪಾಲಿಸಬೇಕು ಎಂದರು.
ಮಹಾದಾಸೋಹಕ್ಕೆ ಚಾಲನೆ: ಹುಲಿಗೆಮ್ಮ ದೇವಿ ಜಾತ್ರೆ ನಿಮಿತ್ತ ಮಹಾದಾಸೋಹಕ್ಕೆ ಸಂಸದ ಕೆ.ರಾಜಶೇಖರ ಹಿಟ್ನಾಳ ಚಾಲನೆ ನೀಡಿದರು. ಜಾತ್ರೆಯ 15 ದಿನಗಳ ಕಾಲ ಭಕ್ತರಿಗೆ ನಿರಂತರವಾಗಿ ದಾಸೋಹ ನಡೆಯಲಿದೆ.
ಹುಲಿಗೆಮ್ಮ ದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಎಚ್.ಪ್ರಕಾಶ್‌ರಾವ್, ಸದಸ್ಯರಾದ ಪಾಲಾಕ್ಷಪ್ಪ ಗುಂಗಾಡಿ, ಈರಣ್ಣ ಇಳಿಗೇರ್, ಶರಣಗೌಡ ಪಾಟೀಲ್, ವಿ.ವೆಂಕಟೇಶ್, ಪಂಪಾಪತಿ ರಾಟಿ, ಪ್ರಮುಖರಾದ ವಿಜಯ್ ಕುಮಾರ್ ಶೆಟ್ಟಿ, ಚಂದನ್ ಶಿವು ದಳಪತಿ, ರಾಜು ಜವಳಿ ಇತರರಿದ್ದರು.