ಕೊಪ್ಪಳ ತಾಲೂಕಿನ ಕಿನ್ನಾಳನಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ನ್ಯಾ. ಮಹಾಂತೇಶ ಎಸ್. ದರಗದ ಉದ್ಘಾಟಿಸಿದರು. ಕಿನ್ನಾಳ ಗ್ರಾಪಂ ಪಿಡಿಒ ಪರಮೇಶ್ವರಯ್ಯ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ರಮೇಶ ಘೋರ್ಪಡೆ ಇದ್ದರು.
ಕೊಪ್ಪಳ : ಶ್ರಮಿಕವರ್ಗ ದೇಶದ ಅಭಿವೃದ್ಧಿ ಮತ್ತು ಉನ್ನತಿಗೆ ಮುನ್ನುಡಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿ ಮಹಾಂತೇಶ ಎಸ್. ದರಗದ ಹೇಳಿದರು.
ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಅಂಗವಾಗಿ ಕಿನ್ನಾಳ ಗ್ರಾಮದ ಹೆಚ್.ಹೆಚ್.ಪಿ. ಕಛೇರಿ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಅಂತರಾಷ್ಟೀಯ ಕಾರ್ಮಿಕ ದಿನ ಎನ್ನುವ ಬದಲು ಶ್ರಮಯೋಗಿ ದಿನ ಎಂದು ಕರೆಯುವುದು ಹೆಚ್ಚು ಸೂಕ್ತ, ಹಿಂದೆ ಶರಣಾಧಿ ಪ್ರಮಥರ ವಾಣಿಗಳಂತೆ ಕಾಯಕದ ಮಹತ್ವವನ್ನು ಬಸವಣ್ಣನವರು ಕಾಯಕವೇ ಕೈಲಾಸ ಎಂದು ನುಡಿದು ಕಾಯಕದ ಮಹತ್ವವನ್ನು ಸಾರಿದ್ದಾರೆ. ಅದೇರೀತಿ ನೀನು ಅಧ್ಯಕ್ಷನಾಗಿರು, ಚಮ್ಮಾರನಾಗಿರು, ಕಮ್ಮಾನಾಗಿರು, ಎನೇ ಆಗಿದ್ದರೂ ಮೊದಲು ಶ್ರಮಯೋಗಿ ಕಾರ್ಮಿಕನಾಗಿರು ಎಂದು ಅಂಬೇಡ್ಕರ್ ಹೇಳಿದ್ದಾರೆ ಎಂದರು.
ಕಾರ್ಮಿಕ ನಿರೀಕ್ಷಕಿ ಮಂಜುಳಾ ವಿಶ್ವನಾಥ ಮಾತನಾಡಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿಮಾರ್ಣ ಕಾರ್ಮಿಕರ ಕಲ್ಯಾಣ ಮಂಡಳಿ ಅಡಿ ಕಟ್ಟಡಕ್ಕೆ ಸಂಬಂಧಿಸಿದಂತೆ ಕೆಲಸ ನಿರ್ವಹಿಸುತ್ತಿರುವವರು ನೋಂದಣಿಯಾಗಲು, ನೋಂದಣಿ ಪೂರ್ವದ 12 ತಿಂಗಳಲ್ಲಿ ಕಟ್ಟಡ ಮತ್ತು ಇತರೆ ನಿಮಾರ್ಣ ಕಾಮಗಾರಿಗಳಲ್ಲಿ ಕನಿಫ್ಠಿ 90 ದಿನಗಳು ಕೆಲಸ ನಿರ್ವಹಿಸಿರಬೇಕು, 18 ರಿಂದ 60 ವರ್ಫಿದೊಳಗಿರಬೇಕು. ಉದ್ಯೋಗ ದೃಢೀಕರಣ ಪತ್ರ ಅರ್ಜಿದಾರ ಹಾಗೂ ಅವಲಂಬಿತರ ಆಧಾರಕಾರ್ಡ್ ಪ್ರತಿ, ಅರ್ಜಿದಾರರ ಬ್ಯಾಂಕ್ ಪಾಸ್ಬುಕ್ ಪ್ರತಿ, ಅರ್ಜಿದಾರರ ಆಧಾರ್ಕಾರ್ಡ್ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ, ಹೊಂದಿರಬೇಕೆಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಜಿಲ್ಲೆಗಳ ನೋಂದಾಯಿತ ಕಾರ್ಮಿಕ ಸಂಘಗಳ ಒಕ್ಕೂಟದ ಅಧ್ಯಕ್ಷ ರಮೇಶ ಘೋರ್ಪಡೆ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ನಮ್ಮ ಕಾರ್ಮಿಕರಿಗೆ ಒಳ್ಳೆಯ ಕಾರ್ಯಕ್ರಮಗಳು ಸೌಲಭ್ಯಗಳನ್ನು ನೀಡುತ್ತಿದೆ. ಇದರಿಂದ ನಮ್ಮ ಕಾರ್ಮಿಕರು ಉತ್ತಮ ಜೀವನ ಕಟ್ಟಿಕೊಳ್ಳಲು ಕಟ್ಟಡ ನಿಮಾರ್ಣ ಕಾರ್ಮಿಕರಿಗೆ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ಕಿನ್ನಾಳ ಗ್ರಾಪಂ ಪಿಡಿಒ ಪರಮೇಶ್ವರಯ್ಯ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಕಾರ್ಮಿಕ ಇಲಾಖೆ ಕ್ಷೇತ್ರ ನಿರ್ವಾಹಕ ಹೇಮಂತ್ಸಿಂಗ್, ಪ್ರಮುಖರಾದ ವಿರೇಶ ತಾವರಗೇರಾ, ಉಮೇಶ ಬಡಿಗೇರ, ಬಸವರಾಜ ಚಿಲವಾಡಗಿ, ಮಹಿಬೂಬ ಮಣ್ಣೂರ ಇತರರಿದ್ದರು.