ಕೊಪ್ಪಳದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಐಕ್ಯತಾ ಓಟಕ್ಕೆ ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ ಚಾಲನೆ ನೀಡಿದರು.
- ಸ್ವಾತಂತ್ರ್ಯಕ್ಕಾಗಿ ಪಟೇಲರು ಸೇರಿ ಅನೇಕರು ಹೋರಾಟ
- ಜಿಲ್ಲಾದ್ಯಂತ ರಾಷ್ಟ್ರೀಯ ಏಕತಾ ದಿನ ಆಚರಣೆ
ಕೊಪ್ಪಳ: ಸರ್ದಾರ್ ವಲ್ಲಭಭಾಯಿ ಪಟೇಲರು ರಾಷ್ಟ್ರೀಯ ಏಕತೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಐಕ್ಯತಾ ಓಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ಪಟೇಲರು ಸೇರಿ ಅನೇಕರು ಹೋರಾಡಿದ್ದಾರೆ. ಐಕ್ಯತೆ ಅವರ ರಕ್ತದಲ್ಲಿತ್ತು. ನಿಸ್ವಾರ್ಥ ಸೇವೆ ಇದ್ದಾಗ ಐಕ್ಯತೆ ಸಾಧ್ಯ. ನಮ್ಮದು ಹಲವು ಧರ್ಮಗಳ ಸಮ್ಮಿಲನ ಇರುವ ದೇಶ. ಭ್ರಷ್ಟಾಚಾರ ದೊಡ್ಡ ಪಿಡುಗಾಗಿ ಕಾಡುತ್ತಿದೆ. ಅದರ ನಿರ್ಮೂಲನೆಗೆ ನಾವೆಲ್ಲ ಶ್ರಮಿಸಬೇಕು. ನಮ್ಮ ಮಕ್ಕಳಿಗೆ ದೇಶಾಭಿಮಾನ, ದೇಶಭಕ್ತಿ ಬೋಧಿಸುವ ಜತೆಗೆ ಐಕ್ಯತೆಯಿಂದ ಬಾಳುವಂತೆ ತಿಳಿಹೇಳಬೇಕೆಂದರು.
ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ, ಜಿಪಂ ಸಿಇಒ ವರ್ಣಿತ್ ನೇಗಿ, ಎಸ್ಪ ಡಾ.ರಾಮ್ ಎಲ್.ಅರಸಿದ್ದಿ, ಲೋಕಾಯುಕ್ತದ ವಿಚಾರಣೆ ಅಪರ ನಿಬಂಧಕರಾದ ಡಾ. ಕಸನಪ್ಪ ನಾಯ್ಕ, ರವಾಕಾಂತ್ ಚವ್ಹಾಣ ಹಾಗೂ ಅರವಿಂದ ಎನ್.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ್ ಎಸ್. ದರಗದ, ರಾಯಚೂರು ಲೋಕಾಯುಕ್ತ ಎಸ್ಪಿ ಸತೀಶ್ ಚಿಟಗುಬ್ಬಿ, ಎಡಿಸಿ ಸಿದ್ರಾಮೇಶ್ವರ ಇತರರಿದ್ದರು.