ಗಂಗಾವತಿ ಗಾಂಧಿ ವೃತ್ತದಲ್ಲಿ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ವಿಜಯೋತ್ಸವ ಆಚರಿಸಿದರು. ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣಮುನವಳ್ಳಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಪದಾಧಿಕಾರಿಗಳಾದ ಸೌಭಾಗ್ಯ, ಕವಿತಾ ಇತರರಿದ್ದರು. 
ಕೊಪ್ಪಳ

ನರೇಂದ್ರ ಮೋದಿ ಸರ್ಕಾರದ ಸಾಧನೆಗೆ ಸಂದ ಜಯ

ಕುರುವತ್ತಿ ಶ್ರೀಕಾಂತಪ್ಪ
ಗಂಗಾವತಿ: ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಿದ ಬಿಜೆಪಿ ಸಾಧನೆ ಸ್ವಾಗತಿಸಿ ಬಿಜೆಪಿ ವಿವಿಧ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ಗಾಂಧಿ ವೃತ್ತದಲ್ಲಿ ಸೋಮವಾರ ವಿಜಯೋತ್ಸವ ಆಚರಿಸಿದರು.
ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು, ಪಶ್ಚಿಮ ಬಂಗಾಳ, ಆಸ್ಸಾಂ ಮತ್ತು ಪುದುಚೇರಿಯಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯನ್ನು ಅಭಿನಂದಿಸಿದರು.
ಮಾಜಿ ಶಾಸಕ ಪರಣ್ಣಮುನವಳ್ಳಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ ಗಮನಿಸಿ ತ್ರಿವಳಿ ರಾಜ್ಯಗಳಲ್ಲಿ ಬಿಜೆಪಿಯನ್ನು ಮತದಾರರು ಬೆಂಬಲಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಾಜಿ ಸಿಎಂ ಮಮತಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷದ ದೌರ್ಜನ್ಯಕ್ಕೆ ಜನ ಬೇಸತ್ತಿದ್ದರು. ತ್ರಿವಳಿ ರಾಜ್ಯಗಳ ಚುನಾವಣೆ ಲಿತಾಂಶ ಮುಂದಿನ ರಾಜಕೀಯಕ್ಕೆ ದಿಕ್ಸೂಚಿಯಾಗಿದೆ ಎಂದರು.
ಮಾಜಿ ಸಂಸದ ಎಸ್.ಶಿವರಾಮನಗೌಡ, ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ ನಗರಸಭೆ ಮಾಜಿ ಸದಸ್ಯರಾದ ಪರಶುರಾಮ್ ಮಡ್ಡೇರ್, ಮೌಲಸಾಬ್, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ,ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದ್ರು ಹೀರೂರ್, ವಿವಿಧ ಮೋರ್ಚಾ ಪದಾಧಿಕಾರಿಗಳಾದ ಡಿ.ಕೆ.ಆಗೋಲಿ, ಚನ್ನವೀರನಗೌಡ, ಯಮನೂರಿ, ಚೌಡ್ಕಿ, ಕಾಶೀನಾಥ ಚಿತ್ರಗಾರ, ಮಹಾಲಿಂಗಪ್ಪ ಬನ್ನಿಕೊಪ್ಪ, ಸೌಭಾಗ್ಯ, ಕವಿತಾ, ಪ್ರಸಾದ ಹಲ್ಟಿ ಮಹಾಂತೇಶ ಶಾಸಿಮಠ, ಸಂಗಮೇಶ ಅಯೋಧ್ಯಾ ಇತರರಿದ್ದರು.