ಕೆಸರು ಗದ್ದೆಯಾದ ವಗದನಾಳ ರಸ್ತೆ 
ಕೊಪ್ಪಳ

ಮಳೆಗೆ ಕೆಸರುಗದ್ದೆಯಾದ ರಸ್ತೆ

ಪ್ರಮುಖ ಮುಖ್ಯಾಂಶಗಳು

  • ಅಧಿಕಾರಿಗಳ ರ್ನಿಲಕ್ಷ್ಯಕ್ಕೆ ಗ್ರಾಮಸ್ಥರ ಆಕ್ರೋಶ
ಕೊಪ್ಪಳ : ಸತತ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ತಾಲೂಕಿನ ವದಗನಾಳ ಗ್ರಾಮದ ರಸ್ತೆಗಳು ಸಂಪೂರ್ಣ ಕೆಸರುಗದ್ದೆಯಾಗಿ ಮಾರ್ಪಟ್ಟಿದ್ದು, ಸಾರ್ವಜನಿಕರ ಹಾಗೂ ವಾಹನ ಸವಾರರ ಸಂಚಾರಕ್ಕೆ ತೀವ್ರ ತೊಂದರೆ ಉಂಟಾಗಿದೆ.
ಗ್ರಾಮದಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಹಾಗೂ ಸಿಸಿ ರಸ್ತೆ ಇಲ್ಲದ ಕಾರಣ, ಮಳೆ ನೀರು ರಸ್ತೆಯಲ್ಲೇ ನಿಂತು ಇಡೀ ಗ್ರಾಮ ನರಕಸದೃಶವಾಗಿದೆ. ಗ್ರಾಮಸ್ಥರು ಕುಡಿಯುವ ನೀರು ತರಲು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ನಿಮಾರ್ಣವಾಗಿದೆ. ಮಹಿಳೆಯರು ನೀರು ಹೊತ್ತು ತರುವಾಗ ರಸ್ತೆಯ ಕೆಸರಿನಲ್ಲಿ ಜಾರಿ ಬೀಳುತ್ತಿದ್ದಾರೆ. ಶಾಲಾ ಮಕ್ಕಳು ಮತ್ತು ವೃದ್ಧರ ಸ್ಥಿತಿಯಂತೂ ಹೇಳತೀರದಾಗಿದೆ.
ರಸ್ತೆ ಮತ್ತು ಚರಂಡಿ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರು ಒಂದು ವರ್ಷದ ಹಿಂದೆಯೇ ನೀರು ನಿಂತಿರುವ ಫೋಟೋ ಸಮೇತ ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿಗೆ ಮನವಿ ಸಲ್ಲಿಸಿದರೂ, ಇದುವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳಿಯ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಂಪೂರ್ಣ ರ್ನಿಲಕ್ಷ್ಯವೇ ಈ ದು@ಸ್ಥಿತಿಗೆ ಕಾರಣವಾಗಿದ್ದು, ವದಗನಾಳ ಗ್ರಾಮಸ್ಥರು ದಿನನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಎಚ್ಚೆತ್ತುಕೊಂಡು, ತಕ್ಷಣವೇ ಗ್ರಾಮಕ್ಕೆ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಿಕೊಟ್ಟು ಜನರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಜನ ಆಗ್ರಹಿಸಿದ್ದಾರೆ.
"

ಮಳೆ ಬಂದ್ರೆ ಸಾಕು, ನಮ್ಮೂರಲ್ಲಿ ಓಡಾಡೋಕೆ ಆಗಲ್ಲ. ಕುಡಿಯೋ ನೀರು ತರಬೇಕಾದ್ರೂ ಕೆಸರಲ್ಲಿ ಜಾರಿ ಬೀಳಬೇಕಾದ ಪರಿಸ್ಥಿತಿ ಇದೆ. ರಸ್ತೆ ಸರಿ ಮಾಡಿ ಅಂತ ಫೋಟೋ ಸಮೇತ ಅಧಿಕಾರಿಗಳಿಗೆ ಮನವಿ ಕೊಟ್ಟು ಒಂದು ವರ್ಷ ಆಯ್ತು. ಆದ್ರೆ ಯಾರಿಗೂ ನಮ್ಮ ಕಷ್ಟ ಕಣ್ಣಿಗೆ ಕಾಣ್ತಿಲ್ಲ. ಬೇಗನೆ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಈ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮುಂದಿನ ಕ್ರಮವನ್ನು ಲೋಕಾಯುಕ್ತರ ಗಮನಕ್ಕೆ ತರುತ್ತವೆ.

— ದೇವೇಂದ್ರಗೌಡ ರ್ಜಿಲಿ, ವಗದನಾಳ ನಿವಾಸಿ