ಬೇಳೂರು ಗ್ರಾಮದಲ್ಲಿ ಬಿಜೆಪಿ ಗ್ರಾಮೀಣ ಮಂಡಲದಿಂದ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ನಿಮಿತ್ತ ಸ್ವಚ್ಛತಾ ಸೇವಾ ಕಾರ್ಯಕ್ರಮ ಜರುಗಿತು. ಎಂಎಲ್ಸಿ ಹೇಮಲತಾ ನಾಯಕ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಗಣೇಶ ವರತಟ್ನಾಳ, ಗ್ರಾಮೀಣ ಮಂಡಲದ ಅಧ್ಯಕ್ಷ ವೀರೇಶ ಸಜ್ಜನ ಇತರರಿದ್ದರು.
- ವಿಪ ಸದಸ್ಯೆ ಹೇಮಲತಾ ನಾಯಕ ಅಭಿಮತ
- ಅಳವಂಡಿ ಬೇಳೂರು ಸ್ವಚ್ಛತಾ ಸೇವಾ
ಅಳವಂಡಿ: ಪ್ರತಿಯೊಬ್ಬರೂ ಜಾತಿ, ಮತ, ಭೇದವಿಲ್ಲದೆ, ಪ್ರೀತಿ ಮತ್ತು ಸೋದರತೆಯಿಂದ ಬದುಕಬೇಕು. ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ತಿಳಿಸಿದರು.
ಸಮೀಪದ ಬೇಳೂರು ಗ್ರಾಮದಲ್ಲಿ ಬಿಜೆಪಿ ಗ್ರಾಮೀಣ ಮಂಡಲದಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಸ್ವಚ್ಛತಾ ಸೇವಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಅಂಬೇಡ್ಕರ್ ಅವರು ದೇಶದ ಸಂವಿಧಾನ ರಚಿಸುವ ಮೂಲಕ ಪ್ರಜಾಪ್ರಭುತ್ವದ ಭದ್ರ ಅಡಿಪಾಯ ಹಾಕಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದ್ದಾರೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಅವರ ಮೂಲ ಮಂತ್ರವಾಗಿತ್ತು. ಅವರ ವಿಚಾರಗಳು ಇಂದಿಗೂ ನಮಗೆ ದಾರಿದೀಪವಾಗಿವೆ ಎಂದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಬಸವರಾಜ ಕ್ಯಾವಟರ್ ಮಾತನಾಡಿ, ಸಮಾಜದಲ್ಲಿ ಮೇಲು-ಕೀಳು ಎಂಬುದು ಇಲ್ಲ. ಇಲ್ಲಿ ಎಲ್ಲರೂ ಸಮಾನರು ಹಾಗೂ ಮಹಿಳೆಯರಿಗೆ ಸಮಾನ ಹಕ್ಕು, ಮತ್ತು ಶಿಕ್ಷಣ ಸಿಗಬೇಕೆಂದು ಅವರು ಸಂವಿಧಾನದ ಮೂಲಕ ತಿಳಿಸಿದ್ದಾರೆ. ಶಿಕ್ಷಣದಿಂದ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ಎಂಬುದನ್ನು ತಿಳಿಸಿದ ಮಹಾನ್ ನಾಯಕ ಡಾ.ಅಂಬೇಡ್ಕರ್ ಅವರಾಗಿದ್ದಾರೆ ಎಂದರು.
ನಂತರ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುತ್ಥಳಿ ಸುತ್ತಲೂ ಸ್ವಚ್ಛತೆ ಮಾಡಿ ನಂತರ ಅವರ ಪುತ್ತಳಿಗೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ನಮಿಸಲಾಯಿತು.
ಬಿಜೆಪಿ ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಗಣೇಶ ವರತಟ್ನಾಳ, ಗ್ರಾಮೀಣ ಮಂಡಲದ ಅಧ್ಯಕ್ಷ ವೀರೇಶ ಸಜ್ಜನ, ಪ್ರ.ಕಾರ್ಯದರ್ಶಿಗಳಾದ ಅಂದಪ್ಪ ಯಲ್ಲಮ್ಮನವರ, ಗುರಪ್ಪ ಗೋಡೆಕರ, ಕೆಎಂಎಫ್ ಮಾಜಿ ನಿರ್ದೇಶಕ ನಾಗನಗೌಡ ನಂದನಗೌಡ, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕೀರಪ್ಪ ಆರೇರ, ಕಾರ್ಯದರ್ಶಿ ಮಾರುತಿ ಹಡಪದ, ಯುವ ಮೋರ್ಚಾ ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷ ಬಸವರಾಜ ಉಳ್ಳಾಗಡ್ಡಿ, ಪ್ರಮುಖರಾದ ನಾಗಪ್ಪ ಬಿಕಹಳ್ಳಿ, ಮಾರುತಿ ಪೂಜಾರ, ರಾಮಣ್ಣ ಚೆಲ್ಲಾ, ರಮೇಶ ಗುಡ್ಲಾನೂರ, ಮುದಿಯಪ್ಪ, ಡಾ.ಮಲ್ಲಿಕಾರ್ಜುನ, ಗವಿ ಬೇಳೂರು, ಸಿದ್ದಪ್ಪ, ಶಿವಾನಂದ ಹಡಪದ, ಗವಿ ನಡುಗುರ್ತಿ, ಮಲ್ಲಿಕಾರ್ಜುನ ಇತರರಿದ್ದರು.