ಗಂಗಾವತಿ ಬಿಜೆಪಿ ಕಚೇರಿಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಗಂಗಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಕುರಿತು ಪದಾಧಿಕಾರಿಗಳ ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ ಮಾತನಾಡಿದರು. ಶಾಸಕ ಗಾಲಿ ಜನಾರ್ದನರೆಡ್ಡಿ, ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಇತರರಿದ್ದರು. 
ಕೊಪ್ಪಳ

ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಲಿ

ಶ್ರೀನಾಥ

ಪ್ರಮುಖ ಮುಖ್ಯಾಂಶಗಳು

  • ವಿಧಾನಪರಿಷತ್ ವಿಪಕ್ಷ ಮುಖ್ಯಸಚೇತಕ ಎನ್.ರವಿಕುಮಾರ ಹೇಳಿಕೆ
  • ಗಂಗಾವತಿ ಚುನಾವಣಾ ಪೂರ್ವಸಿದ್ಧತೆ ಪದಾಧಿಕಾರಿಗಳ ಸಭೆ
ಗಂಗಾವತಿ: ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕಿದ್ದು, ಪಕ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ವಿಧಾನಪರಿಷತ್ ವಿಪಕ್ಷ ಮುಖ್ಯಸಚೇತಕ ಎನ್.ರವಿಕುಮಾರ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಗಂಗಾವತಿ ವಿಧಾನಸಭಾ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಕುರಿತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಮತದಾರರಿಗೆ ಬಿಜೆಪಿ ಪ್ರಣಾಳಿಕೆಯ ಬಗ್ಗೆ ಮನವರಿಕೆ ಮಾಡಬೇಕಿದ್ದು, ಕಾಂಗ್ರೆಸ್ ಆಡಳಿತಾವಧಿಯಲ್ಲಿ ವೈಲ್ಯದ ಬಗ್ಗೆಯೂ ತಿಳಿವಳಿಕೆ ನೀಡಿ. ಪಕ್ಷದ ಪದಾಧಿಕಾರಿಗಳು ಮತ್ತು ಬೂತ್‌ಮಟ್ಟದ ಪ್ರತಿನಿಧಿಗಳು ಪಕ್ಷ ಸಂಘಟನೆಗೆ ಒತ್ತು ನೀಡಬೇಕಿದ್ದು, ಜನರಿಗೆ ಹತ್ತಿರವಾಗುವ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಲಹೆ ನೀಡಿದರು.
ಶಾಸಕ ಗಾಲಿ ಜನಾರ್ದನರೆಡ್ಡಿ ಮಾತನಾಡಿ, ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವ ವಿಶ್ವಾಸವಿದೆ ಎಂದರು. ಕ್ಷೇತ್ರದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಸಬೆಯಲ್ಲಿ ಚರ್ಚಿಸಿದ್ದು, ಅಭಿಯಾನದ ಪ್ರಗತಿ, ಕಾರ್ಯತಂತ್ರ ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು.
ಮಾಜಿ ಸಂಸದ ಎಸ್.ಶಿವರಾಮನಗೌಡ, ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕಾಡಾ ಮಾಜಿ ಅಧ್ಯಕ್ಷ ಬಿ.ಎಚ್.ಎಂ.ತಿಪ್ಪೇರುದ್ರಸ್ವಾಮಿ, ಟಿಎಪಿಸಿಎಂಎಸ್ ಅಧ್ಯಕ್ಷ ಚನ್ನಪ್ಪ ಮಳಗಿ, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್, ಮಾಜಿ ಅಧ್ಯಕ್ಷ ಸಿಂಗನಾಳ ವಿರೂಪಾಕ್ಷಪ್ಪ, ಉಪಾಧ್ಯಕ್ಷ ಮನೋಹರಗೌಡ ಹೇರೂರು, ನಗರ ಮಂಡಲ ಅಧ್ಯಕ್ಷ ಚಂದ್ರಶೇಖರ ಹಿರೂರು, ಗ್ರಾಮೀಣ ಮಂಡಲ ಅಧ್ಯಕ್ಷ ಡಿ.ಕೆ ಆಗೋಲಿ, ಬಿಎಲ್‌ಎ-1 ವೀರೇಶ ಬಲಕುಂದಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಆಗಲೂರು, ಪ್ರಮುಖರಾದ ಮಾಲಾ ನಾಯಕ್, ಯಮನೂರ್ ಚೌಡ್ಕಿ ಇತರರಿದ್ದರು.