ವಡ್ಡರಹಟ್ಟಿ ಕ್ಯಾಂಪ್ ನೀರಾವರಿ ಇಲಾಖೆ ಮುಂದೆ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ತಾಲೂಕು ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ, ಪದಾಧಿಕಾರಿಗಳಾದ ಶರಣಬಸವ ಹೇರೂರು, ಹುಚ್ಚಯ್ಯ ಸ್ವಾಮಿ, ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಇತರರಿದ್ದರು.
- ಕಾರ್ಮಿಕರಿಗೆ
- ಉದ್ಯೋಗ
- ಭದ್ರತೆ
ಗಂಗಾವತಿ : ಕಾರ್ಮಿಕ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಪಾಲಿಸುವಂತೆ ಒತ್ತಾಯಿಸಿ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಸದಸ್ಯರು ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನೀರಾವರಿ ಇಲಾಖೆ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.
ಎಐಸಿಸಿಟಿಯು ಜಿಲ್ಲಾ ಸಮಿತಿ ಪದಾಧಿಕಾರಿಗಳೊಂದಿಗೆ ಪ್ರತಿಭಟಿಸಿದ ಸಮಿತಿ ಸದಸ್ಯರು, ಆದೇಶಗಳನ್ನು ಪಾಲಿಸಿ, ಇಲ್ಲವೇ ಲಿಖಿತ ಉತ್ತರ ನೀಡುವಂತೆ ಒತ್ತಾಯಿಸಿದರು. ಸಂಘದ ತಾಲೂಕು ಅಧ್ಯಕ್ಷ ಕೆ.ನಾಗಲಿಂಗಸ್ವಾಮಿ ಮಾತನಾಡಿ, ಕಾರ್ಮಿಕರ ಬಾಕಿ ವೇತನ ಪಾವತಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಕಾರ್ಮಿಕ ನ್ಯಾಯಾಲಯದ ಆದೇಶಗಳನ್ನು ಇದುವರೆಗೂ ಪಾಲಿಸಿಲ್ಲ. ನೀರಾವರಿ ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಉದ್ಯೋಗ ಭದ್ರತೆಯಿಲ್ಲದಂತಾಗಿದ್ದು, ನಾಲ್ಕು ತಿಂಗಳ ವೇತನ ಸಿಕ್ಕಿಲ್ಲ. ಹಲವು ಬಾರಿ ಆಯೋಜಿಸಿದ್ದ ಸಂಧಾನ ಸಭೆ ಹಾಗೂ ಕಾರ್ಮಿಕ ಇಲಾಖೆಯ ಮುಂದಾಳತ್ವದಲ್ಲಿ ತೆಗೆದುಕೊಳ್ಳಲಾದ ನಿರ್ಧಾರಗಳನ್ನು ಜಾರಿಗೊಳಿಸಿಲ್ಲ.
ಇದರಿಂದ ಕಾರ್ಮಿಕರು ಸಂಕಷ್ಟಕ್ಕೊಳಗಾಗಿದ್ದಾರೆ. ಉದ್ಯೋಗ ಭದ್ರತೆ, ಕನಿಷ್ಠ ವೇತನ, ಇಎಸ್‌ಐ, ಪಿಎ್ ಸೇರಿ ಕಾನೂನುಬದ್ಧ ಸೌಲಭ್ಯ ಒದಗಿಸುವಂತೆ ಒತ್ತಾಯಿಸಿದರು.
ಪದಾಧಿಕಾರಿಗಳಾದ ಶರಣಬಸವ ಹೇರೂರು, ಹುಚ್ಚಯ್ಯ ಸ್ವಾಮಿ, ಎಐಸಿಸಿಟಿಯು ಜಿಲ್ಲಾಧ್ಯಕ್ಷ ವಿಜಯ್ ದೊರೆರಾಜು ಮಾತನಾಡಿದರು.