ನೂತನ ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರಿಗೆ ನಿರ್ಗಮಿತ ಡಿಸಿ ವಿಕಾಸ್ ಕಿಶೋರ್ ಬುಧವಾರ ಅಧಿಕಾರ ಹಸ್ತಾಂತರಿಸಿದರು. 
ಜಿಲ್ಲೆ

ಡಿಸಿ ಸುಂದರೇಶ ಬಾಬು ಅಧಿಕಾರ ಸ್ವೀಕಾರ

Koppal

ಕೊಪ್ಪಳ: ನೂತನ ಜಿಲ್ಲಾಧಿಕಾರಿ ಸುಂದರೇಶಬಾಬು ಎಂ. ಬುಧವಾರ ಅಧಿಕಾರವಹಿಸಿಕೊಂಡರು. ನಿರ್ಗಮಿತ ಡಿಸಿ ಎಸ್.ವಿಕಾಸ್ ಕಿಶೋರ್ ಹೂಗುಚ್ಛ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಜಿಲ್ಲಾಧಿಕಾರಿ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿ ಇದ್ದರು. 2012ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸುಂದರೇಶಬಾಬು ಮೂಲತಃ ತಮಿಳುನಾಡಿನವರು. ಮದುರೈ ಕೃಷಿ ವಿಶ್ವವಿದ್ಯಾಲಯದಿಂದ 2004 ರಲ್ಲಿ ಬಿ.ಎಸ್ಸಿ ಅಗ್ರಿ ಪದವಿ ಪಡೆದು ಕೆಲಕಾಲ ಕೆನರಾ ಬ್ಯಾಂಕ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. 2012ರಲ್ಲಿ ಐಎಎಸ್ ಅಧಿಕಾರಿಯಾಗಿ ಕರ್ನಾಟಕ ಕೇಡರ್‌ಗೆ ಆಯ್ಕೆಯಾಗಿದ್ದಾರೆ. ಧಾರವಾಡ ಉಪವಿಭಾಗಾಧಿಕಾರಿಯಾಗಿ, ವಿಜಯಪುರ ಜಿಪಂ ಸಿಇಒ, ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಹಾಗೂ ಗದಗ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.