ಕಾರಟಗಿ: ಬೂದಗುಂಪಾ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊಸಜೂರಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಖೋಖೋ, ಥ್ರೋಬಾಲ್, 100 ಮೀಟರ್ ಓಟ, ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಬಾಲಕಿಯರ ವಿಭಾಗದಲ್ಲಿ 4*100 ಮೀಟರ್ ರೀಲೆ, ಚಕ್ರ ಎಸೆತ, 100 ಮೀಟರ್ ಓಟ, 200ಮೀಟರ್ ಓಟದಲ್ಲಿ ಪ್ರಥಮಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಗುಂಡು ಎಸೆತ ದ್ವಿತೀಯ ಹಾಗೂ ತೃತೀಯ, 100 ಮೀಟರ್ ಓಟ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅಲ್ಲದೆ, ವಿವಿಧ ವೈಯಕ್ತಿಕ ವಿಭಾಗಗಳಲ್ಲಿ ಗೆಲುವು ಸಾಧಿಸುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಮುಖ್ಯಶಿಕ್ಷಕ ರಮೇಶ ಕುಕನೂರು ತಿಳಿಸಿದ್ದಾರೆ.