ಜಿಲ್ಲೆ

ಕೊರಗರ ಮೇಲೆ ಹಲ್ಲೆ ಮಾಡಿದ ಕೋಟ ಠಾಣಾ ಪಿಎಸ್ಐ ಅಮಾನತು

ಗೋಪಾಲಕೃಷ್ಣ ಪಾದೂರ್

ಉಡುಪಿ:  ಕೊರಗರ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಲಾಟಿಚಾರ್ಜ್ ಮಾಡಿದ ಘಟನೆಗೆ ಸಂಬಂಧಿಸಿ ಕೋಟ ಠಾಣಾಧಿಕಾರಿ ಸಂತೋಷ್‌ ಬಿ.ಪಿ ಅವರನ್ನು ಅಮಾನತುಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಅವರು ಆದೇಶ ಹೊರಡಿಸಿದ್ದಾರೆ. ಜತೆಗೆ ಐದು ಮಂದಿ ಸಿಬಂದಿಯನ್ನು  ಬೇರೆ ಠಾಣೆಗಳಿಗೆ ವರ್ಗಾಯಿಸಲಾಗಿದೆ.

ಸೋಮವಾರ ರಾತ್ರಿ ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮನೆಯಲ್ಲಿ ನಡೆದ ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಡಿಜೆ ಹಾಕಿದ್ದಾರೆ ಎಂಬ  ದೂರಿನ ಅನ್ವಯ ತೆರಳಿದ್ದ ಪಿಎಸ್‌ ಐ ಮದುಮಗ ಸಹಿತ ಮನೆಯವರ ಮೇಲೆ ಲಾಠಿ ಪ್ರಹಾರ ನಡೆಸಿದ್ದರಿಂದ ಹಲವರು ಗಾಯಗೊಂಡಿದ್ದರು. ಈ ಬಗ್ಗೆ ರಾಜ್ಯದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲು  ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌. ವಿಷ್ಣುವರ್ಧನ್‌ ಅವರು ತನಿಖೆಗೆ ಆದೇಶ ನೀಡಿದ್ದರು.