ಎಚ್. ಡಿ.ಕೋಟೆ : ಹಿಂದುಳಿದಿರುವ ಎಚ್. ಡಿ.ಕೋಟೆ ತಾಲೂಕಿನ ಅಭಿವೃದ್ಧಿಗಾಗಿ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಏಜಾಜ್ ಪಾಷ ಒತ್ತಾಯಿಸಿದರು.
ರಾಜ್ಯದಲ್ಲಿ ತೀರಾ ಹಿಂದುಳಿದ ವಿಧಾನಸಭಾ ಕ್ಷೇತ್ರಗಳಲ್ಲಿ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರವೂ ಒಂದಾಗಿದೆ. ಭೂ ವಿಸ್ತೀರ್ಣದಲ್ಲಿ ಬಹು ದೊಡ್ಡ ತಾಲೂಕಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸಿಎಂ ಗಮನ ಹರಿಸಬೇಕು ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಗೋಷ್ಠಿಯಲ್ಲಿ ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜ್, ಪ್ರಧಾನ ಕಾರ್ಯದರ್ಶಿ ಚಾಮರಾಜು, ಟೌನ್ ಅಧ್ಯಕ್ಷ ಸ್ಟುಡಿಯೋ ಪ್ರಕಾಶ್ ಇತರರು ಉಪಸ್ಥಿತರಿದ್ದರು.