ವಿಜಯವಾಣಿ ಸುದ್ದಿಜಾಲ ಕುಂದಾಪುರ
ಗುರುವಿನಲ್ಲಿ ದೇವರನ್ನು ಕಾಣುತ್ತಿದ್ದೇವೆ. ಧಾರ್ಮಿಕವಾಗಿ ನಮ್ಮ ವ್ಯಕ್ತಿತ್ವ ರೂಪುಗೊಳ್ಳಬೇಕಾದರೆ ನಮ್ಮ ಸಮುದಾಯದ ಮೂಲಕ ಸಾಧ್ಯ. ನಮ್ಮ ದೇಹ ಮತ್ತು ಮನಸ್ಸನ್ನು ಭವಿಷ್ಯದ ಜೀವನಕ್ಕೆ ಸಿದ್ಧಗೊಳಿಸುವುದಕ್ಕಾಗಿ ಗುರುಗಳ ಮಾರ್ಗದರ್ಶನ ಬಹಳ ಮುಖ್ಯ ಎಂದು ಮಂಗಳೂರಿನ ಅಜಲಸ್ ಡಯಾಗ್ನಾಸ್ಟಿಕ್ಸ್‌ನ ಡಾ.ಚಂದ್ರಯ್ಯ ಆಚಾರ್ಯ ಹೇಳಿದರು.
ಕೋಟೇಶ್ವರದ ಶ್ರೀ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಸಮಾಜ ಯುವಕ ದಳ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ ಹಾಗೂ ಶ್ರೀದೇವಿ ಮಹಿಳಾ ಮಂಡಳಿ ಆಶ್ರಯದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮಹೋತ್ಸವದ ಅಂಗವಾಗಿ ಸೋಮವಾರ ನಡೆದ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.
ವಿಶ್ವಕರ್ಮ ಬ್ರಾಹ್ಮಣ ಸಮಾಜ ಯುವಕ ಸೇವಾ ಸಂಘ ಅಧ್ಯಕ್ಷ, ರಥಶಿಲ್ಪಿ ರಾಜಗೋಪಾಲ ಆಚಾರ್ಯ ಶುಭಾಶಂಸನೆಗೈದರು. ರೋಹಿತಾಕ್ಷ ಆಚಾರ್ಯ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವರು.
ಕೋಟೇಶ್ವರ ಶ್ರೀ ವಿಶ್ವಕರ್ಮ ಸಮಾಜ ಯುವಕ ದಳ ಅಧ್ಯಕ್ಷ ಸುರೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾರವಾರ ಕೊಂಕಣ ರೈಲ್ವೆಯ ನಾಗೇಂದ್ರ ಆಚಾರ್ಯ ತಲ್ಲೂರು, ಶ್ರೀ ದೇವಿ ಮಹಿಳಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಗೋಪಾಲ ಆಚಾರ್ಯ, ವಿಶ್ವಕರ್ಮ ಸಮಾಜ ಯುವಕ ದಳದ ನಿಯೋಜಿತ ಅಧ್ಯಕ್ಷ ಚಂದ್ರಯ್ಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ ಆಚಾರ್ಯ ಸ್ವಾಗತಿಸಿದರು. ಜೀವಿ ವೆಂಕಟೇಶ್ ಆಚಾರ್ಯ ವಂದಿಸಿದರು.ಗಣೇಶ್ ಆಚಾರ್ಯ ಕುಂಬ್ರಿ ನಿರೂಪಿಸಿದರು. ಪ್ರಕಾಶ ಆಚಾರ್ಯ, ದಿನೇಶ್ ಆಚಾರ್ಯ, ಸತೀಶ್ ಆಚಾರ್ಯ, ಸತ್ಯನಾರಾಯಣ ಆಚಾರ್ಯ, ಕೆ.ಆರ್.ರಾಘವೇಂದ್ರ ಆಚಾರ್ಯ ಸಹಕರಿಸಿದರು.
ಶಿಲ್ಪಿ ವಿಠಲ ಆಚಾರ್ಯ ಬಸ್ರೂರು ಅವರನ್ನು ಸಮ್ಮಾನಿಸಲಾಯಿತು. ಕಲಾವಿದ ಧನುಷ್ ಆಚಾರ್ಯ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. 2024-26ರ ವಿಶ್ವಕರ್ಮ ಸಮಾಜ ಯುವಕ ದಳದ ಆಡಳಿತ ಮಂಡಳಿ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.