ಜಿಲ್ಲೆ

ಕೋಟಿ ಪಂಚಾಕ್ಷರಿ ಜಪ ಯಜ್ಞ ಆಮಂತ್ರಣ ಬಿಡುಗಡೆ

ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಡಿಸೆಂಬರ್ 16ರಿಂದ 19ರವರೆಗೆ ಜರುಗಲಿರುವ ಕೋಟಿ ಪಂಚಾಕ್ಷರಿ ಜಪ ಯಜ್ಞದ ಆಮಂತ್ರಣ ಪತ್ರಿಕೆ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.

ಶ್ರೀ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರು ಹಾಗೂ ಕ್ಷೇತ್ರ ತಂತ್ರಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಬಿಡುಗಡೆಗೊಳಿಸಿದರು.

ಶ್ರೀ ವೆಂಕಟ್ರಮಣ ಬಾಲಗೋಕುಲದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಡಾ.ಅನಂತ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಹೋಟೆಲ್ ಉದ್ಯಮಿ ರಾಮ್‌ಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ಟಿ.ರಾಜೇಶ್, ಆಡಳಿತ ಸಮಿತಿ ಅಧ್ಯಕ್ಷ ವಕೀಲ ಗೋವಿಂದನ್ ನಾಯರ್, ಯಜ್ಞ ಸಮಿತಿ ಉಪಾಧ್ಯಕ್ಷೆ ಮೀರಾ ಕಾಮತ್ ಉಪಸ್ಥಿತರಿದ್ದರು.

ಯಜ್ಞ ಸಮಿತಿ ಕಾರ್ಯಾಧ್ಯಕ್ಷ ಡಾ.ಕೆ.ಎನ್.ವೆಂಕಟ್ರಮಣ ಹೊಳ್ಳ ಸ್ವಾಗತಿಸಿದರು. ದೇವದಾಸ ನುಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಕೆ.ಆರ್. ವಂದಿಸಿದರು.