ಕೊಟ್ಟೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಶಾಸಕ ನೇಮಿರಾಜ್ ನಾಯ್ಕ, ಪಪಂ ಅಧ್ಯಕ್ಷೆ ಬಿ.ರೇಖಾ, ಉಪಾಧ್ಯಕ್ಷ ಜಿ.ಸಿದ್ದಯ್ಯ, ತಹಸೀಲ್ದಾರ್ ಜಿ.ಕೆ. ಅಮರೇಶ, ತಾಪಂ ಇಒ ಡಾ.ಬಿ. ಆನಂದ ಕುಮಾರ್, ಬಿಇಒ ಪದ್ಮನಾಭ ಕರಣಂ ಇತರರಿದ್ದರು. 
ಜಿಲ್ಲೆ

ಶಿಕ್ಷಕರದು ಬೆಲೆ ಕಟ್ಟಲಾಗದಂತಹ ವೃತ್ತಿ

ನರೇಶ್ ಕುಮಾರ್

ಕೊಟ್ಟೂರು: ಮಕ್ಕಳನ್ನು ತಿದ್ದಿ ಭವಿಷ್ಯ ರೂಪಿಸಿ ಸಮಾಜದಲ್ಲಿ ಸತ್ಪ್ರಜೆಯನ್ನಾಗಿ ಮಾಡುವ ಶಿಕ್ಷಕರು ದೇವರು ಸಮಾನರು ಎಂದು ಶಾಸಕ ನೇಮಿರಾಜ್ ನಾಯ್ಕ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರದು ಬೆಲೆ ಕಟ್ಟಲಾಗದಂತಹ ವೃತ್ತಿ. ನಾನು ಶಾಸಕನಾಗಿ ಒಂದೂವರೆ ವರ್ಷದಲ್ಲಿ ಕ್ಷೇತ್ರದ ಅಭಿವೃದ್ದಿಗೆ ವಿವಿಧ ಯೋಜನೆಗಳ ಅನುದಾನದಿಂದ 700 ರೂ. ಕೋಟಿ ರೂ. ತಂದಿದ್ದೇನೆ. ಕೊಟ್ಟೂರಿನ ಸರ್ಕಾರಿ ಆಸ್ಪತ್ರೆಯನ್ನು 50 ಬೆಡ್‌ಗಳಿಗೆ ಮೇಲ್ದರ್ಜೆಗೇರಿಸಲಾಗಿದೆ. ಪಟ್ಟಣದ ಪ್ರತಿ ವಾರ್ಡ್‌ನಲ್ಲಿ ಸಿ.ಸಿ.ರಸ್ತೆ. ಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಂದ ಮನವಿ ಸ್ವೀಕರಿಸಿ ಶಾಸಕ ಮಾತನಾಡಿ, ಕೊಟ್ಟೂರಿನಲ್ಲಿ ಗುರುಭವನ ನಿರ್ಮಿಸಲು ತಹಸೀಲ್ದಾರ್ ಅವರು ಸರ್ಕಾರಿ ಜಾಗ ಗುರುತಿಸಿದರೆ, ನಿರ್ಮಾಣಕ್ಕೆ ಶಾಸಕರ ಅನುದಾನದಿಂದ 50 ಲಕ್ಷ ರೂ. ಬಿಡುಗಡೆ ಮಾಡುವುದಾಗಿ ತಿಳಿಸಿದರು.
ತಾಪಂ ಇಒ ಡಾ.ಬಿ.ಆನಂದ ಕುಮಾರ್ ಮಾತನಾಡಿದರು.

ಪಪಂ ಅಧ್ಯಕ್ಷೆ ಬಿ.ರೇಖಾ, ಉಪಾಧ್ಯಕ್ಷ ಜಿ. ಸಿದ್ದಯ್ಯ, ತಹಸೀಲ್ದಾರ್ ಜಿ.ಕೆ. ಅಮರೇಶ, ಬಿಇಒ ಪದ್ಮನಾಭ ಕರಣಂ, ಪೌಢ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಡಿ.ಸಿದ್ದಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಕಾರ್ಯದರ್ಶಿ ಜಿ. ಸಿದ್ದಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಭಾರ ಅಧ್ಯಕ್ಷೆ ಕೆ.ಶಶಿಕಲಾ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಪಿ.ನಾಗೇಶ, ಕ್ಷೇತ್ರ ಸಮನ್ವಯ ಅಧಿಕಾರಿ ಎಸ್.ಎಸ್. ಜಗದೀಶ ಇತರರಿದ್ದರು. ಪ್ರಾಥಮಿಕ ಮತ್ತು ಪ್ರೌಢ ಶಾಲಾ ನಿವೃತ್ತ ಶಿಕ್ಷಕರು, 19 ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ಸೇವಾವಧಿಯಲ್ಲಿ ನಿಧನರಾದ ನಾಲ್ವರ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹಾಗೂ ರಾಜ್ಯ ವಿಜ್ಞಾನ ಪ್ರಶಸ್ತಿ ಪುರಸ್ಕೃತ ಜಿ.ಫಕ್ಕೀರಪ್ಪ ಅವರನ್ನು ಸನ್ಮಾನಿಸಲಾಯಿತು.