ದಾವಣಗೆರೆ: ಆಜಾದ್ ನಗರದ ಗೋದಾಮೊಂದರ ಮೇಲೆ ಭಾನುವಾರ ದಾಳಿ ನಡೆಸಿದ ಅಧಿಕಾರಿಗಳು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ತಲಾ 50 ಕೆಜಿಯ ಒಟ್ಟು 600 ಚೀಲ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಇದರಲ್ಲಿ ಕರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ದಾನದ ರೂಪದಲ್ಲಿ ನೀಡಲಾಗಿದ್ದ ಸ್ಟೀಮ್ಡ್ ಅಕ್ಕಿ ಕೂಡ ಸೇರ್ಪಡೆಯಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ತಹಸೀಲ್ದಾರ್ ಬಿ.ಎನ್.ಗಿರೀಶ್ ನೇತೃತ್ವದಲ್ಲಿ ಕಂದಾಯ ನಿರೀಕ್ಷಕ ಕೇಶವಮೂರ್ತಿ, ಗ್ರಾಮ ಲೆಕ್ಕಿಗರಾದ ಶಿವಕುಮಾರ್, ಇಮ್ರಾನ್ ಹಾಗೂ ಆಹಾರ ನಿರೀಕ್ಷಕ ರವಿ ಅವರ ತಂಡ ಈ ಕಾರ್ಯಾಚರಣೆ ನಡೆಸಿತ್ತು. ಆಜಾದ್‌ನಗರ ಠಾಣೆ ಪೊಲೀಸರು ಅಗತ್ಯ ವಸ್ತುಗಳ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.