ಜಿಲ್ಲೆ

ಇವಿಎಂ ಯಂತ್ರ ಹ್ಯಾಕ್ ಸಾಧ್ಯತೆ: ತನಿಖೆಗೆ ಒತ್ತಾಯಿಸಲು ಕೆಪಿಸಿಸಿ ಮುಖಂಡರ ಚರ್ಚೆ

reportermys

ಮಡಿಕೇರಿ: ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಇವಿಎಂ ಯಂತ್ರವನ್ನು ಹ್ಯಾಕ್ ಮಾಡಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆಗೆ ಒತ್ತಾಯಿಸಲು ಕೆಪಿಸಿಸಿ ಮುಖಂಡರು ಚರ್ಚಿಸುತ್ತಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವೀಕ್ಷಕ ಟಿ.ಎಂ.ಶಾಹೀದ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಾ ಹಾಗೂ ಆರ್‌ಆರ್ ನಗರದಲ್ಲಿ ನಡೆದ ಉಪಚುನಾವಣೆಯಲ್ಲಿ ಇವಿಎಂ ಯಂತ್ರ ಹ್ಯಾಕ್ ಮಾಡಿರುವ ಸಂಶಯ ವ್ಯಕ್ತವಾಗಿದೆ. ಬಿಜೆಪಿ ಅಧಿಕಾರ ಹಾಗೂ ಚುನಾವಣಾ ಆಯೋಗವನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಸಾಧ್ಯತೆ ಇದೆ. ಜತೆಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿ ಹಣದ ಹೊಳೆ ಹರಿಸಲಾಗಿದೆ. ಈ ಹಿನ್ನೆಲೆ ತನಿಖೆಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಡಿಕೇರಿ ಬ್ಲಾಕ್ ಅಧ್ಯಕ್ಷ ಖಲೀಲ್ ಭಾಷಾ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಸದಸ್ಯೆ ಗೀತಾ ಧರ್ಮಪ್ಪ, ಪ್ರಮುಖರಾದ ಸುಜುತಿಮ್ಮಯ್ಯ ಉಪಸ್ಥಿತರಿದ್ದರು.