ಬೆಂಗಳೂರು: ನಕಲಿ ವೈದ್ಯರ ಹಾವಳಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲು ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ಕಟ್ಟಡದ ಮುಂಭಾಗದಲ್ಲಿ ಕೆಪಿಎಂಇ ನೋಂದಣಿ ಸಂಖ್ಯೆಯೊಂದಿಗೆ, ಆಸ್ಪತ್ರೆ ಮತ್ತು ಮಾಲೀಕರ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಸೂಚಿಸಿ ಆರೋಗ್ಯ ಇಲಾಖೆ ಆದೇಶಿಸಿದೆ.
ಈ ಸಂಬಂಧ ಇಲಾಖೆ ಆಯುಕ್ತ ಡಿ. ರಂದೀಪ್ ಸುತ್ತೋಲೆ ಹೊರಡಿಸಿದ್ದು, ಕೆಪಿಎಂಇ ಕಾಯ್ದೆ ನಿಯಮ (5)ರ ಪ್ರಕಾರ ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರಗಳನ್ನೂ ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸುವಂತೆ ಸೂಚಿಸಿದ್ದಾರ
ಕೆಲ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ಸಾಂಪ್ರದಾಯಿಕ ಹಾಗೂ ಪರಂಪರಿಕ ಪದ್ಧತಿ, ಮನೆ ಮದ್ದುಗಳು, ಕಪ್ಪಿಂಗ್ ಥೆರಪಿ, ಎಲೆಕ್ಟ್ರೋಮ್ಯಾಗ್ನೆಟಿಕ್ ಥೆರಪಿ, ಬಾಡಿ ಮಸಾಜ್, ಹಿ್ರೆೆಥೆರಪಿ ಮತ್ತು ಸೌಂಡ್ ಥೆರಪಿಯಂತಹ ಅನಧಿಕೃತ ಪದ್ಧತಿಗಳ ಅಭ್ಯಾಸದಲ್ಲಿ ತೊಡಗಿಕೊಂಡಿರುವುದು ಗಮನಕ್ಕೆ ಬಂದಿದೆ.
ಆದರೆ ಈ ವ್ಯವಸ್ಥೆಗಳು ಕೆಪಿಎಂಇ ಕಾಯ್ದೆ ವಿಭಾಗ 2(1) ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆಗಳಾಗಿ ವರ್ಗೀಕರಿಸಿಲ್ಲ. ಆದ್ದರಿಂದ ಎಲ್ಲಾ ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ಹೊರಭಾಗದಲ್ಲಿ (ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ) ಸೂಚಿತ ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಿದ್ದಾರೆ.
ರೋಗಿಗಳು ಮತ್ತು ಸಾರ್ವಜನಿಕರಿಗೆ ಖಾಸಗಿ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಚಿಕಿತ್ಸಾ ಪದ್ಧತಿಯನ್ನು ಸುಲಭವಾಗಿ ಗುರುತಿಸಲು ಉಪಯುಕ್ತವಾಗುವಂತೆ ಬಣ್ಣದ ಬೋರ್ಡ್ ಅಳವಡಿಸಲು ಎಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ನಿರ್ದೇಶಿಸುವಂತೆ ಹಾಗೂ ಬೋರ್ಡ್ ಅಳವಡಿಕೆ ಕುರಿತು ಅಂಕಿ ಅಂಶಗಳ ಸಹಿತ ಜು. 31ರೊಳಗೆ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯಾವುದೇ ಖಾಸಗಿ ವೈದ್ಯಕೀಯ ಸಂಸ್ಥೆಯು ಈ ನಿಯಮಗಳನ್ನು ಅನುಸರಿಸಲು ವಿಫಲವಾದಲ್ಲಿ, ಅಂತಹವರ ವಿರುದ್ಧ ಕೆಪಿಎಂಇ ತಿದ್ದುಪಡಿ ಕಾಯ್ದೆ 2017 ರ ಸೆಕ್ಷನ್ 19(5) ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.