ಜಿಲ್ಲೆ

3ರಂದು ಕೆಪಿಎಸ್-2024 ವಾರ್ಷಿಕೋತ್ಸವ

Mysuru - Desk - Yashavanth Kumar N

ಯಳಂದೂರು: ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಫೆ.3ರಂದು ಕೆಪಿಎಸ್-2024 ಫೆಸ್ಟ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಪ್ರಾಂಶುಪಾಲ ಆರ್.ನಂಜುಂಡಸ್ವಾಮಿ ಮಾಹಿತಿ ನೀಡಿದರು.

ಶಾಲೆಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಶಾಲಾ ಮಕ್ಕಳು ಪ್ರತಿಭೆ ತೋರ್ಪಡಿಸುವ ನಿಟ್ಟಿನಲ್ಲಿ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಶಾಸಕ ಎ.ಆರ್.ಕೃಷ್ಣಮೂರ್ತಿ ಉದ್ಘಾಟಿಸಲಿದ್ದು, ಅನೇಕ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಕರ್ನಾಟಕ ಪಬ್ಲಿಕ್ ಶಾಲೆಯು ಜಿಲ್ಲೆಯಲ್ಲೇ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಇಲ್ಲಿನ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಪಠ್ಯೇತರ ಹಾಗೂ ಕ್ರೀಡಾ ಚಟುವಟಿಕೆಯಲ್ಲೂ ನಮ್ಮ ಶಾಲೆಯ ಮಕ್ಕಳು ತಾಲೂಕು, ಜಿಲ್ಲಾ, ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು.