ಜಿಲ್ಲೆ

ಆ.25ರಂದು ಕೃಷ್ಣ ವೇಷ ಸ್ಪರ್ಧೆ

ಇಂದಿರಾ ಎನ್ ಕೆ

ಗಂಗೊಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಯುವಕ ಮಂಡಲ, ಅಮೃತಾ ಯುವತಿ ಮಂಡಲ, ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ, ಗಂಗೊಳ್ಳಿ ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಆಶ್ರಯದಲ್ಲಿ 12ನೇ ವರ್ಷದ ಮುದ್ದು ಕೃಷ್ಣ ವೇಷ ಸ್ಪರ್ಧೆ ಮೇಲ್ ಗಂಗೊಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಆ.25ರಂದು ನಡೆಯಲಿದೆ. ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಉಪಾಧ್ಯಕ್ಷ ಸುಧಾಕರ ಆಚಾರ್ಯ ಅಧ್ಯಕ್ಷತೆ ವಹಿಸುವರು. ಸೇವಾ ಸಂಗಮ ನಿವೇದಿತಾ ಶಿಶುಮಂದಿರ ಮಾಜಿ ಅಧ್ಯಕ್ಷೆ ಸವಿತಾ ಯು.ದೇವಾಡಿಗ ಅತಿಥಿಯಾಗಿದ್ದಾರೆ. ನಿವೃತ್ತ ಶಿಕ್ಷಕ ಪ್ರೇಮಾನಂದ ಕೆ. ಬಹುಮಾನ ವಿತರಿಸಲಿದ್ದಾರೆ.