ಕೆ.ಆರ್.ಪೇಟೆ ಪಟ್ಟಣದ ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ರಾಧಾ-ಕೃಷ್ಣ ವೇಷ ಪ್ರದರ್ಶನ ಏರ್ಪಡಿಸಲಾಗಿತ್ತು. 
ಜಿಲ್ಲೆ

ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಧಾ-ಕೃಷ್ಣ ವೇಷ ಪ್ರದರ್ಶನ

ನಾಗೇಶ ಎಸ್

ಕೆ.ಆರ್.ಪೇಟೆ: ಪಟ್ಟಣದ ಪ್ರಗತಿ ಆಂಗ್ಲ ಮಾಧ್ಯಮ ಶಾಲಾ ಆವರಣದಲ್ಲಿ ರಾಧಾ-ಕೃಷ್ಣ ವೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಶಾಲೆಯ ಮಕ್ಕಳು ಶ್ರೀ ಕೃಷ್ಣ ಹಾಗೂ ರಾಧೆಯ ವೇಷಗಳನ್ನು ಧರಿಸಿ ತಮ್ಮ ಬಣ್ಣದ ಪ್ರದರ್ಶನ ನೀಡಿದರು. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಸುಮಾರಾಣಿ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿ ಮಾತನಾಡಿ, ಪಾಲಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರ ಬೆಳೆಸಬೇಕು. ಮಕ್ಕಳಿಗೆ ಮೊಬೈಲ್ ನೀಡುವುದನ್ನು ನಿಲ್ಲಿಸಬೇಕು. ಮೊಬೈಲ್ ಮಕ್ಕಳಲ್ಲಿ ಚಟವಾಗಿ ಮಾರ್ಪಡುತ್ತದೆ. ಇದರಿಂದ ಹಲವಾರು ದುಷ್ಪರಿಣಾಮಗಳು ಉಂಟಾಗುತ್ತದೆ. ವೈಯಕ್ತಿಕವಾಗಿ ಕುಟುಂಬಕ್ಕೆ ಸಮಾಜಕ್ಕೆ ಹಾನಿಯಾಗುತ್ತದೆ ಎಂದು ಸಲಹೆ ನೀಡಿದರು.

ಮಕ್ಕಳ ಚಲನವಲನವನ್ನು ಗಮನಿಸಬೇಕು, ಪಾಲಕರು ಮಕ್ಕಳ ಜತೆ ಹೆಚ್ಚಿನ ಸಮಯ ಕಳೆಯಬೇಕು, ಪ್ರೀತಿ ವಿಶ್ವಾಸದಿಂದ ಕಂಡು ಸತ್ಪ್ರಜೆಗಳನ್ನಾಗಿ ಮಾಡಲು ಪ್ರಯತ್ನಿಸಬೇಕು. ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಅಷ್ಟೇ ಉತ್ತಮ ಗುಣವೂ ಅಗತ್ಯವಾಗಿರುತ್ತದೆ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲ ಕೆ. ಕಾಳೇಗೌಡ ವಹಿಸಿದ್ದರು. ಕೃಷ್ಣರಾಜ ಪದವಿ ಪೂರ್ವ ಕಾಲೇಜಿನ ಆಡಳಿತ ಅಧಿಕಾರಿ ಎಸ್.ಬಿ.ಲೋಕೇಶ್ ಮಾತನಾಡಿದರು. ಪ್ರಗತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಟಿ.ಶೈಲಜಾ, ಸಿಇಒ ಡಾ.ಎಂ.ಕೆ.ಮೋನಿಕಾ ಇದ್ದರು.