????????????????????????????????????????????????????????????????????????????????????????????????????????????????????????????????????????????????????????????????????????????????????????? 
ಜಿಲ್ಲೆ

ಕೃಷ್ಣಾ ನದಿಗೆ 1.66 ಲಕ್ಷ ಕ್ಯೂಸೆಕ್ ನೀರು

ಅಶೋಕ್ ಕುಮಾರ್ ಎನ್

ದೇವದುರ್ಗ: ಮಹಾರಾಷ್ಟ್ರ ಹಾಗೂ ಕೃಷ್ಣಾ ಮೇಲ್ದಂಡೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ಬಸವಸಾಗರ ಜಲಾಶಯದಿಂದ ನದಿಗೆ ಶುಕ್ರವಾರ ಬೆಳಗ್ಗೆ 1.66 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಹೂವಿನಹೆಡಗಿ ಸೇತುವೆ ಬಳಿಯ ಶ್ರೀ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳುಗಡೆಯಾಗಿದೆ.

ಗುರುವಾರ ನದಿಗೆ 1.18 ಲಕ್ಷ ಕ್ಯೂಸೆಕ್ ನೀರು ಹರಿಸಲಾಗಿತ್ತು. ಒಳಹರಿವು ಹೆಚ್ಚಾಗಿರುವುದರಿಂದ ಶುಕ್ರವಾರ 30 ಕ್ರಸ್ಟ್‌ಗೇಟ್‌ಗಳ ಮೂಲಕ 1.66 ಲಕ್ಷ ಕ್ಯೂಸೆಕ್ ನೀರನ್ನು ಹರಿಸಲಾಗಿದೆ. ಡ್ಯಾಂನಲ್ಲಿ 26.58 ಟಿಎಂಸಿ ನೀರು ಸಂಗ್ರಹವಾಗಿದೆ. ನದಿದಂಡೆಯಲ್ಲಿ ರೈತರು ಅಳವಡಿಸಿರುವ ಪಂಪ್‌ಸೆಟ್ ಹಾಗೂ ಪೈಪ್‌ಗಳು ಮುಳುಗಡೆಯಾಗಿವೆ. ಕೆಲವೆಡೆ ಕೃಷಿ ಜಮೀನಿನವರೆಗೆ ನೀರು ಬಂದಿದೆ.

ವೀರಗೋಟದ ಮೌನಲಿಂಗೇಶ್ವರ, ಅಂಜಳ ಗ್ರಾಮದ ಬಸವೇಶ್ವರ ದೇವಸ್ಥಾನ, ಕೊಪ್ಪರದ ಲಕ್ಷ್ಮೀನರಸಿಂಹ ದೇವಸ್ಥಾನ, ಬಸವೇಶ್ವರ ದೇವಸ್ಥಾನ, ಆಂಜನೇಯ ದೇವಸ್ಥಾನ, ಅರಸಿಣಿಗಿ ಅಣೆಮಲ್ಲೇಶ್ವರ ದೇವಾಲಯ ಹಾಗೂ ಗೂಗಲ್ ಅಲ್ಲಪ್ರಭು ದೇವಸ್ಥಾನದ ಮೆಟ್ಟಿಲುವರೆಗೆ ನೀರು ಬಂದಿದೆ.