ಕೃಷ್ಣಾ ನದಿಗೆ 64ಸಾವಿರ ಕ್ಯೂಸೆಕ್ ನೀರು ಹರಿಬಿಟ್ಟಿದ್ದರಿಂದ ಹೂವಿನಹೆಡಗಿ ಶ್ರೀಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸುತ್ತ ನೀರು ಆವರಿಸಿರುವುದು. 
ಜಿಲ್ಲೆ

ಜಲಾಶಯದಲ್ಲಿ ಹೆಚ್ಚಿದ ಒಳಹರಿವು ಪ್ರಮಾಣ, ದೇವಸ್ಥಾನ ಸುತ್ತ ಆವರಿಸಿದ ನದಿ

ದೇವದುರ್ಗ: ಕೃಷ್ಣಾ ನದಿ ಮೇಲ್ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ಭಾನುವಾರ ಸಂಜೆಯಿಂದ 64 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗಿದೆ. ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹೆಚ್ಚಿನ ಒಳಹರಿವಿದೆ. ಮುಂಜಾಗ್ರತೆ ಕ್ರಮವಾಗಿ ಕೃಷ್ಣಾ ನದಿಗೆ ಹೆಚ್ಚಿನ ನೀರು ಹರಿ ಬಿಡಲಾಗಿದೆ. ಇದರಿಂದಾಗಿ ಹೂವಿನಹೆಡಗಿ ಗಡ್ಡೆಗೂಳಿ ಬಸವೇಶ್ವರ ದೇವಸ್ಥಾನ ಸುತ್ತ ನೀರು ಆವರಿಸಿವೆ. 33 ಟಿಎಂಸಿ ಸಾಮರ್ಥ್ಯದ ನಾರಾಯಣಪುರ ಜಲಾಶಯದಲ್ಲಿ ಸದ್ಯ 32 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. ಒಳಬರುವ ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ ಎಂದು ಜಲಾಶಯದ ಎಇಇ ರಾಮನಗೌಡ ಹಳ್ಳೂರು ತಿಳಿಸಿದ್ದಾರೆ.