ಕೆ.ಆರ್.ನಗರ : ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದು ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಚ್.ಕೆ.ಕೃಷ್ಣಯ್ಯ ಹೇಳಿದರು. ಪಟ್ಟಣದ ಶ್ರೀ ಕೃಷ್ಣರಾಜೇಂದ್ರ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಕಾಲೇಜಿನ ವಿದ್ಯಾರ್ಥಿನಿಯರನ್ನು ಅಭಿನಂದಿಸಿ ಮಾತನಾಡಿದರು.ಕ್ರೀಡಾಕೂಟದಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು 17 ಪಂದ್ಯಗಳಲ್ಲಿ ಭಾಗವಹಿಸಿದ್ದಾರೆ. 14 ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ಮೇಲುಗೈ ಸಾಧಿಸಿದ್ದಾರೆ. ಇದು ಹೆಮ್ಮೆ ಪಡುವ ಸಂಗತಿ ಎಂದರು.ವಿವಿಧ ಸ್ಪರ್ಧೆ ವಿಜೇತಗ ಕ್ರೀಡಾ ಪಟುಗಳಾದ ಅಮೂಲ್ಯ, ಪ್ರೇಮಾ, ಯಶಸ್ವಿನಿ, ಚಂದನಾ, ಚಿಂತನಾ, ಲಿಖಿತಾ, ಶಾಲಿನಿ ಇತರರು ಇದ್ದರು. ಉಪನ್ಯಾಸಕರಾದ ಕೃಷ್ಣ, ಎಚ್.ಸಿ.ಜಗದೀಶ್, ಸುರುಚಿ, ಡಾ.ಕುಮಾರ್, ಸಿಬ್ಬಂದಿಗಳಾದ ಮಹೇಶ್, ಶಶಿಗೌಡ ಸೇರಿದಂತೆ ಉಪನ್ಯಾಸಕರು ಇದ್ದರು.