ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಪಂ ವ್ಯಾಪ್ತಿಯ ಕಡೇಬಾಗಿಲಿನಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನರೆಡ್ಡಿ ಮಾತನಾಡಿದರು. ಜಿಲ್ಲಾಧ್ಯಕ್ಷ ಮನೋಹರಗೌಡ ಹೇರೂರು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಸುರೇಶ ಇತರರಿದ್ದರು. 
ಜಿಲ್ಲೆ

ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಗಮನ

ಗಂಗಾವತಿ: ಚುನಾವಣೆ ಪ್ರಣಾಳಿಕೆಯ ಅಂಶಗಳನ್ನು ಅಧಿಕಾರ ಪಡೆದ ವರ್ಷದೊಳಗೆ ಪೂರೈಸುತ್ತೇವೆ. ಕ್ಷೇತ್ರದ ಅಭಿವೃದ್ಧಿಯತ್ತ ವಿಶೇಷ ಗಮನ ನೀಡಲಾಗುವುದು ಎಂದು ಕೆಆರ್‌ಪಿಪಿ ಸಂಸ್ಥಾಪಕ ಅಧ್ಯಕ್ಷ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ತಾಲೂಕಿನ ಆನೆಗೊಂದಿ ಗ್ರಾಪಂ ವ್ಯಾಪ್ತಿಯ ಕಡೇಬಾಗಿಲಿನಲ್ಲಿ ಮಂಗಳವಾರ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಮಾತನಾಡಿ, ಚುನಾವಣಾ ಆಯೋಗದಿಂದ ಪಕ್ಷದ ಚಿನ್ಹೆಯಾಗಿ ುಟ್ಬಾಲ್ ದೊರೆತಿದ್ದು, ವಿಜಯದ ಸಂಕೇತ ಎಂದರು.

ಕ್ಷೇತ್ರದ ಅಭಿವೃದ್ಧಿ ವಿಚಾರ ಮುಂದಿಟ್ಟುಕೊಂಡು ಮತ ಕೇಳಲಾಗುತ್ತಿದ್ದು, ಮಹಿಳೆಯರು ಮತ್ತು ಯುವಕರನ್ನು ಸ್ವಾವಲಂಬಿಯನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಗೂಗಿಬಂಡಿಕ್ಯಾಂಪ್, ಬಸವನದುರ್ಗ, ಕೃಷ್ಣಾಪುರ ಡಗ್ಗಿ, ಸಾಯಿನಗರ, ರಾಯಲುನಗರ, ನಾಗರಹಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಪ್ರಚಾರ ಕೈಗೊಳ್ಳಲಾಯಿತು. ನಂತರ ಜರುಗಿದ ಪಕ್ಷದ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಸೇರಿ ವಿವಿಧ ಸಂಘಟನೆ ಕಾರ್ಯಕರ್ತರು ಕೆಆರ್‌ಪಿಪಿಗೆ ಸೇರ್ಪಡೆಯಾದರು.

ಜಿಲ್ಲಾಧ್ಯಕ್ಷ ಮನೋಹರಗೌಡ ಹೇರೂರು, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರಾಜೇಶ್ವರಿ ಸುರೇಶ, ಗ್ರಾಮೀಣ ಘಟಕದ ಅಧ್ಯಕ್ಷ ಡಿ.ಕೆ.ಆಗೋಲಿ, ವಿವಿಧ ಘಟಕಗಳ ಪದಾಧಿಕಾರಿಗಳಾದ ಸೈಯ್ಯದ್ ಜೀಲಾನಿ ಪಾಶಾ ಖಾದ್ರಿ, ಜೋಗದ ದುರುಗಪ್ಪ ನಾಯಕ, ಯಮನೂರಚೌಡ್ಕಿ, ಮಂಜುನಾಥ ಕೋಲ್ಕಾರ್ ಇತರರಿದ್ದರು.