ವಿಜಯಪುರ ಜಿಲ್ಲಾಡಳಿತಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಮನವಿ ಸಲ್ಲಿಸಿದರು. ಶಿವಾನಂದ ಯಡಹಳ್ಳಿ, ಗಣಪತಿ ರಾಠೋಡ, ದೀಪಾ ಮರನೂರ ಮತ್ತಿತರರಿದ್ದಾರೆ.  
ಜಿಲ್ಲೆ

ದರ್ಶನ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಕೆಆರ್‌ಎಸ್ ಪಕ್ಷ ಆಗ್ರಹ

ವಿಜಯಪುರ: ನಟ ದರ್ಶನ ಮೇಲಿರುವ ಕೊಲೆ ಪ್ರಕರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಲು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಡಳಿತದ ಮೂಲಕ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಅಭಿಮಾನಿಯನ್ನೇ ಕೊಲ್ಲುವ ಮೃಗೀಯ ಭಾವನೆ ಹೊಂದಿರುವ ನಟ ದರ್ಶನ ಪ್ರಭಾವಿ ರಾಜಕಾರಣಿಗಳ ಆಪ್ತರಾಗಿದ್ದು, ಸಾಕ್ಷಿ ನಾಶದ ಜೊತೆಯಲ್ಲಿ ಪ್ರಕರಣದ ತನಿಖೆಯಲ್ಲಿ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿವೆ. ಅಲ್ಲದೆ ನಟ ದರ್ಶನರವರು ತಮ್ಮನ್ನು ಈ ಪ್ರಕರಣದಿಂದ ಕೈಬಿಟ್ಟರೆ ಕೇಳಿದಷ್ಟು ಹಣ ಕೊಡುವುದಾಗಿ ಪೊಲೀಸ್ ಅಧಿಕಾರಿಗಳಿಗೆ ಆಮಿಷವೊಡ್ಡಿರುವುದು ಮಾಧ್ಯಮಗಳಲ್ಲಿ ಬಿತ್ತರಗೊಂಡಿದೆ. ಹಾಗಾಗಿ ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದರು.

ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ಗಣಪತಿ ರಾಠೋಡ, ದೀಪಾ ಮರನೂರ, ದುರ್ಗಪ್ಪ ಬೂದಿಹಾಳ, ಲಕ್ಷ್ಮಣ ಚಡಚಣ, ರಾಕೇಶ ಇಂಗಳಗಿ, ಪ್ರವೀಣ ಕನಸೇ ಮತ್ತಿತರಿದ್ದರು.