ಮಂಡ್ಯ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ ಎಸ್.ಎಚ್.ಲಿಂಗೇಗೌಡ ಅವರ ನಿಧನ ಹಿನ್ನೆಲೆಯಲ್ಲಿ ಡಿ.29ರಂದು ಬೆಳಗ್ಗೆ 10.30ಕ್ಕೆ ನಗರದ ರೈತ ಸಭಾಂಗಣದಲ್ಲಿ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ಜಿ.ಎಂ.ರಮೇಶ್‌ಗೌಡ ತಿಳಿಸಿದರು.
ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳನ್ನು ತ್ವರಿತ ಗತಿಯಲ್ಲಿ ವಿಚಾರಣೆ ಮಾಡಿ, ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡುವಂತೆ ಒತ್ತಾಯಿಸಿ ಪ್ರಧಾನ ಮಂತ್ರಿ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸುವ ಸಲುವಾಗಿ ನಡೆಯುತ್ತಿದ್ದ ಪಾದಯಾತ್ರೆ ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು. ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಸೇರಿದಂತೆ ಪದಾಧಿಕಾರಿ ಹಾಗೂ ಲಿಂಗೇಗೌಡ ಅವರ ಕುಟುಂಬ ಪಾಲ್ಗೊಳ್ಳಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿಲ್ಲಾಧ್ಯಕ್ಷ ಡಿ.ಜಿ.ನಾಗರಾಜ್, ಉಪಾಧ್ಯಕ್ಷ ಮಲ್ಲೇಶ್, ಕಾರ್ಯದರ್ಶಿ ವೈ.ಕೆ.ಶಶಿಧರ್, ಜಗದೀಶ ಇದ್ದರು.