ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸ್ವತಂತ್ರ ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ಜಯಲಕ್ಷ್ಮೀ, ಗೂಳಿಹಟ್ಟಿ ಶೇಖರ್, ಮಹಾಲಿಂಗಯ್ಯ ಶಾಸ್ತ್ರಿ ಇದ್ದರು. 
ಜಿಲ್ಲೆ

ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆ

ನವೀನ ಬಿ.ಎಂ

ಶಿವಮೊಗ್ಗ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ಮೇದುವಾರಿಕೆ ಸಲ್ಲಿಸಿದರು. ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೆಳಗ್ಗೆ ನಗರದ ಶಕ್ತಿ ದೇವತೆಗಳಾದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನ ಹಾಗೂ ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸಾವಿರಾರು ಬೆಂಬಲಿಗರೊಡಗೂಡಿ ಮೆರವಣಿಗೆ ನಡೆಸಿದರು. ಸುಡುವ ಬಿಸಿಲನ್ನೂ ಲೆಕ್ಕಿಸದೆ ಅಭಿಮಾನಿಗಳು, ಬೆಂಬಲಿಗರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ವೇಷಧಾರಿಯೊಬ್ಬರು ಮೆರವಣಿಗೆಯಲ್ಲಿ ಎಲ್ಲರ ಗಮನ ಸೆಳೆದರು.