ದೊಡ್ಡಬಳ್ಳಾಪುರ : ತಾಲೂಕಿನ ಮೆಣಸಿ ಗೇಟ್ ಬಳಿಯ ದಾಬಸ್ಪೇಟೆ&ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ&648ರಲ್ಲಿ ಟಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ರಸ್ತೆಯ ತಡೆಗೋಡೆಗೆ ಗುದ್ದಿದೆ. ಬಸ್ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಎಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.
ಸೂಲಿಕುಂಟೆ&ದೊಡ್ಡಬಳ್ಳಾಪುರ ಮಾರ್ಗವಾಗಿ ದೊಡ್ಡಬಳ್ಳಾಪುರ ನಗರಕ್ಕೆ ಬರುವ ವೇಳೆ ಅವಡ ಸಂಭವಿಸಿದೆ. ಚಾಲಕ ಮುನಿಶ್ಯಾಮಪ್ಪ ಅವರ ಸಮಯ ಪ್ರೆಯಿಂದ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಪ್ರಾಣ ಉಳಿದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.