ಕಾಸರಗೋಡು: ಪಿಂಚಣಿಯಲ್ಲಿ 13 ವರ್ಷಗಳಿಂದ ಯಾವುದೇ ಹೆಚ್ಚಳವಾಗದಿರುವುದರಿಂದ ಕೆಎಸ್ಸಾರ್ಟಿಸಿ ಪಿಂಚಣಿದಾರರ ಬದುಕು ದುಸ್ತರವಾಗಿದ್ದು, ಸರ್ಕಾರದ ಗಮನ ಸೆಳೆಯುವ ನಿಟ್ಟಿನಲ್ಲಿ ತಿರುವನಂತಪುರದ ಸೆಕ್ರೆಟೆರಿಯೆಟ್ ಎದುರು ಮಂಗಳವಾರ ಆರಂಭಗೊಂಡ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಕಾಸರಗೋಡು ಡಿಪೋ ವಠಾರದಲ್ಲಿ ಸಾಂಕೇತಿಕ ಧರಣಿ ನಡೆಯಿತು.
ಪಿಂಚಣಿದಾರರ ಸಂಘಟನೆ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಎಂ.ವಿ.ಕುಞಿರಾಮನ್ ಧರಣಿ ಉದ್ಘಾಟಿಸಿದರು. ಟಿ.ಪದ್ಮನಾಭನ್ ನಾಯರ್ ಅಧ್ಯಕ್ಷತೆ ವಹಿಸಿದ್ದರು. ಪಿ.ವಿ.ನಾರಾಯಣನ್ ಉಪಸ್ಥಿತರಿದ್ದರು. ಕೆ.ರಾಮಕೃಷ್ಣನ್ ಸ್ವಾಗತಿಸಿದರು. ಕೆ.ವಿ.ಕುಞಿರಾಮನ್ ವಂದಿಸಿದರು.