ಜಿಲ್ಲೆ

ಫೆ.2ರಂದು ನಗರದಲ್ಲಿ ಕೆಎಸ್‌ಎಸ್ ದಶಮಾನೋತ್ಸವ: ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ಮಾಹಿತಿ

ಕೆ.ಎನ್.ರಾಘವೇಂದ್ರ

ಮಂಡ್ಯ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಫೆ.2ರಂದು 75ನೇ ಸಂವಿಧಾನ ಅಮೃತೋತ್ಸವ ಆಚರಣೆ ಮತ್ತು ಕರ್ನಾಟಕ ಸ್ವಾಭಿಮಾನಿ ಸಮಸಮಾಜದ(ಕೆಎಸ್‌ಎಸ್) ದಶಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಎಚ್.ಎನ್.ನರಸಿಂಹಮೂರ್ತಿ ಹೇಳಿದರು.

ಅಂದು ಬೆಳಗ್ಗೆ 10.30ಕ್ಕೆ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಸಾನಿಧ್ಯದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭಾಗವಹಿಸಲಿದ್ದು, ಸಂಘಟನೆಯ ಸಂಸ್ಥಾಪಕ ಡಾ.ಕುಮಾರಸ್ವಾಮಿ ಸಾಕ್ಯ ಅಧ್ಯಕ್ಷತೆ ವಹಿಸುವರು. ಶಾಸಕ ರವಿಕುಮಾರ್ ಗಣಿಗ, ಮುಡಾ ಅಧ್ಯಕ್ಷ ನಯೀಂ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದೇ ವೇಳೆ ಐಎಎಸ್ ಅಧಿಕಾರಿ ಬಿ.ಶರತ್, ಆದರ್ಶ ಸಂಸ್ಥೆಯ ಅಧ್ಯಕ್ಷ ಡಾ.ಮೂರ್ತಿ, ಕಾರ್ಯಪಾಲಕ ಇಂಜಿನಿಯರ್ ಎಚ್.ಜನಾರ್ಧನ್, ಅಬಕಾರಿ ನಿರೀಕ್ಷಕ ತಿರುಮಲಾಪುರ ನಾರಾಯಣ್ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಂಘಟನೆಯ ಸಂಸ್ಥಾಪಕ ಡಾ.ಕುಮಾರಸ್ವಾಮಿ ಸಾಕ್ಯ, ರಾಜ್ಯ ಉಪಾಧ್ಯಕ್ಷ ಜಿ.ಎಸ್.ಸ್ವಾಮಿ, ಜಿಲ್ಲಾಧ್ಯಕ್ಷ ಚೌದರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್, ಅಭಿ ಇದ್ದರು.