ಜಿಲ್ಲೆ

ಕುಡ್ಲದ ಪಿಲಿ ಪರ್ಬ : ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡಕ್ಕೆ ಪ್ರಥಮ ಪ್ರಶಸ್ತಿ

Mangaluru - Hariprasad Rai



ಮಂಗಳೂರು : ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಗರದ ಕೇಂದ್ರ ಮೈದಾನದಲ್ಲಿ ನಡೆದ ಮೂರನೇ ವರ್ಷದ ಕುಡ್ಲದ ಪಿಲಿಪರ್ಬ ಹುಲಿ ವೇಷ ಸ್ಪರ್ಧೆಯಲ್ಲಿ ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡ ಪ್ರಥಮ ಪ್ರಶಸ್ತಿ ಪಡೆಯಿತು. ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡ ದ್ವಿತೀಯ ಪ್ರಶಸ್ತಿ ಪಡೆಯಿತು. ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ಹಾಗೂ ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡಗಳು ಜಂಟಿಯಾಗಿ ತೃತೀಯ ಪ್ರಶಸ್ತಿ ಪಡೆದವು.
ಪಿಲಿಪರ್ಬದ ವಿಶೇಷ ಬಹುಮಾನಗಳಾದ ಕಪ್ಪು ಪಿಲಿ ಪ್ರಶಸ್ತಿಯನ್ನು ಟ್ಯಾಲೆಂಟ್ ಟೈಗರ್ಸ್ ತುಳುನಾಡು ತಂಡ , ಮರಿ ಹುಲಿ ಪ್ರಶಸ್ತಿಯನ್ನು ಮುಳಿಹಿತ್ಲು ಫ್ರೆಂಡ್ಸ್ ಸರ್ಕಲ್ ತಂಡ, ಪರ್ಬದ ಪಿಲಿ ಪ್ರಶಸ್ತಿಯನ್ನು ಟೀಮ್ ಕಲ್ಲೇಗ ಟೈಗರ್ಸ್ ಪುತ್ತೂರು ತಂಡ ,
ಶಿಸ್ತಿನ ತಂಡ ಪ್ರಶಸ್ತಿಯನ್ನು ಟೀಮ್ ಪರಶುರಾಮ್ ಕುಡ್ಲ ತಂಡ, ಬಣ್ಣಗಾರಿಕೆ ಹಾಗೂ ಮೆರವಣಿಗೆ ವಿಭಾಗದ ದ್ವಿತೀಯ
ಪ್ರಶಸ್ತಿಯನ್ನು ಎಸ್.ಕೆ.ಬಿ ಟೈಗರ್ಸ್ ಕುಂಪಲ ತಂಡ, ಮುಡಿ ವಿಭಾಗದ ಪ್ರಶಸ್ತಿಯನ್ನು ನಂದಿಗುಡ್ಡ ಫ್ರೆಂಡ್ಸ್ ಬಾಬುಗುಡ್ಡೆ ತಂಡ , ಧರಣಿ ಮಂಡಲ ಹಾಗೂ ಮೆರವಣಿಗೆ ವಿಭಾಗದ ಪ್ರಥಮ ಸ್ಥಾನವನ್ನು ಎಂಎಫ್‌ಟಿ ಮುಳಿಹಿತ್ಲು ತಂಡ , ಹಿಮ್ಮೇಳ ವಿಭಾಗದ
ಪ್ರಶಸ್ತಿಯನ್ನು ಪುರಲ್ದಪ್ಪೆನ ಮೋಕೆದ ಬೊಳ್ಳಿಲು ಪೊಳಲಿ ಟೈಗರ್ಸ್ ತಂಡ ಪಡೆದವು.
ಜನಪ್ರಿಯ ನಟರಾದ ರಿಷಬ್ ಶೆಟ್ಟಿ, ರಾಜ್ ಬಿ.ಶೆಟ್ಟಿ, ಪ್ರಮೋದ್ ಶೆಟ್ಟಿ, ಅರ್ಜುನ್ ಕಾಪಿಕಾಡ್, ವಿನೀತ್ ಕುಮಾರ್, ಸಮತಾ ಅಮೀನ್, ಬಿಗ್‌ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ ಸಹಿತ ಹಲವು ಚಿತ್ರ ತಾರೆಯರು ಆಗಮಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಪಿಲಿಪರ್ಬದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕ ಡಿ.ವೇದವ್ಯಾಸ ಕಾಮತ್, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ, ನಟ ಡಾ. ದೇವದಾಸ್ ಕಾಪಿಕಾಡ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾರೋಪ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್ ಬಹುಮಾನಗಳನ್ನು ವಿತರಿಸಿದರು. ಶಾಸಕ ಡಿ.ವೇದವ್ಯಾಸ ಕಾಮತ್, ಕದ್ರಿ ನವನೀತ್ ಶೆಟ್ಟಿ, ಕೆ.ಕೆ.ಪೇಜಾವರ, ಬಜಿಲಕೇರಿ ಕಮಲಾಕ್ಷ, ಶ್ರೀನಿವಾಸ ನಾಯಕ್ ಇಂದಾಜೆ, ಪಿ.ಬಿ.ಹರೀಶ್ ರೈ, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ ಪಾಂಡೇಶ್ವರ , ಸದಸ್ಯರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಮುಂತಾದವರು ಉಪಸ್ಥಿತರಿದ್ದರು.