ಕೂಡ್ಲಿಗಿಯಲ್ಲಿ ಉಪತಹಸೀಲ್ದಾರ್ ಎಸ್.ಚಂದ್ರಶೇಖರಗೆ ಸಿಪಿಐ ಕಾರ್ಯಕರ್ತರು ಮನವಿ ಸಲ್ಲಿಸಿದರು. ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ, ತಾಲೂಕು ಕಾರ್ಯದರ್ಶಿ ಕರಿಯಪ್ಪ, ಖಜಾಂಚಿ ಯು.ಪೆನ್ನಪ್ಪ, ಓಬಳೇಶ, ಸಾಡಿ ದೊಡ್ಡಪ್ಪ, ಕರಿಯಪ್ಪ ಇತರರಿದ್ದರು. 
ಜಿಲ್ಲೆ

ದೇಶದ ಒಕ್ಕೂಟ ವ್ಯವಸ್ಥೆಗೆ ಮಾರಕ

ಕೂಡ್ಲಿಗಿ: ದೇಶದ ಒಕ್ಕೂಟದ ವ್ಯವಸ್ಥೆ ಅಸ್ಥಿತರಗೊಳಿಸುತ್ತಿರುವ, ಪ್ರಜಾಪ್ರಭುತ್ವಕ್ಕೆ ಮಾರಕವಾಗಿರುವ ರಾಜ್ಯಪಾಲರ ಹುದ್ದೆ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ ಕಾರ್ಯಕರ್ತರು ಗುರುವಾರ ರಾಷ್ಟ್ರಪತಿಗೆ ಬರೆದ ಪತ್ರವನ್ನು ಉಪ ತಹಸೀಲ್ದಾರ್ ಎಸ್.ಚಂದ್ರಶೇಖರಗೆ ಸಲ್ಲಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್.ವೀರಣ್ಣ ಮಾತನಾಡಿ, ಕರ್ನಾಟಕದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಅವಲೋಕಿಸಿದರೆ ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನರಿಂದ ಬಹುಮತ ಪಡೆದ ಚುನಾಯಿತ ರಾಜ್ಯ ಸರ್ಕಾರವನ್ನು ಕೇಂದ್ರವು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಮುಂದಾಗಿರುವುದು ಖಂಡನೀಯ. ಮುಡಾ, ವಾಲ್ಮೀಕಿ ನಿಗಮದ ಹಗರಣವನ್ನು ನ್ಯಾಯಾಂಗದ ಚೌಕಟ್ಟಿನಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಆದರೆ, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರ ಹುದ್ದೆ ರಾಜಕೀಯವಾಗಿ ದುರ್ಬಳಕೆಯಾಗುತ್ತದೆ. ಇಂತಹ ರಾಜ್ಯಪಾಲರ ಹುದ್ದೆ ರದ್ದುಗೊಳಿಸಲು ಇದು ಸಕಾಲವಾಗಿದ್ದು, ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಿಪಿಐ ತಾಲೂಕು ಕಾರ್ಯದರ್ಶಿ ಕರಿಯಪ್ಪ, ಖಜಾಂಚಿ ಯು. ಪೆನ್ನಪ್ಪ, ಓಬಳೇಶ, ಸಾಡಿ ದೊಡ್ಡಪ್ಪ, ಕರಿಯಪ್ಪ, ಮಲ್ಲಿಕಾರ್ಜುನ, ಶ್ರೀನಿವಾಸಲು, ಸಾಲಮ್ಮ, ಪಾಲಯ್ಯ, ಚಂದ್ರಣ್ಣ, ನಾಗರಾಜ ಇತರರಿದ್ದರು.