ಕೂಡ್ಲಿಗಿ: ಪಟ್ಟಣದ ಬಾಪೂಜಿ ನಗರದ 2ನೇ ವಾರ್ಡಿನ ತಳವಾರ ಚೌಡಪ್ಪ ಅವರ ಮನೆಯಲ್ಲಿ ಬಂಗಾರ ಹಾಗೂ ನಗದು ಕಳ್ಳತನವಾಗಿರುವುದು ಗುರುವಾರ ಬೆಳಕಿಗೆ ಬಂದಿದೆ.
ಮೂರ್ನಾಲ್ಕು ದಿನಗಳ ಹಿಂದೆ ಚೌಡಪ್ಪ ಮನೆಗೆ ಬೀಗ ಹಾಕಿಕೊಂಡು ಊರಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಮನೆ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಅಲ್ಮರಾದಲ್ಲಿದ್ದ 10 ತೊಲ ಬಂಗಾರ ಹಾಗೂ 50 ಸಾವಿರ ರೂ. ಕಳ್ಳತನ ಮಾಡಿದ್ದಾರೆ. ಗುರುವಾರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಚೌಡಪ್ಪ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.